1.ಗೋಧಿ
2.ಮುಸುಕಿನ ಜೋಳ
3.ಬಿಳಿಜೋಳ
4.ಕಡಲೆ ಬೀಜ
5.ಕಡಲೆ ಕಾಳು
6.ಹುರಿಗಡಲೆ
7.ಅಕ್ಕಿ ತರಿ
8.ತುಗರಿ ಬೇಳೆ
ಇವೆಲ್ಲವುಗಳನ್ನು 1ಕಿಲೋನಂತೆ ಕಲೆಸಿಕೊಂಡು ನಿತ್ಯ ಮುಂಜಾನೆ 7 ಹಿಡಿ ಗಳನ್ನು ತಗೆದುಕೊಂಡು ತಲೆಗೆ ಪ್ರದಕ್ಷಿಣೆ ಹಾಕಿ(ತಿರುಗಿಸಿ) ಗುಬ್ಬಿ/ ಪಾರಿವಾಳ ಗಳಿಗೆ ಹಾಕಿರಿ ನಿಮ್ಮ ಯಾವುದೇ ರೀತಿಯ ಸಮಸ್ಯೆಗಳಿಂದ ಪರಿಹಾರ ಪಡೆಯಿರಿ.
ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ
Comments