ವಿವಾಹವೆಂಬ ಕಲ್ಪನೆಯು ಒಂದು ದೇಶದಿಂದ ಮತ್ತೊಂದು ದೇಶಕ್ಕೂ ಹಾಗು ಪೀಳಿಗೆಯಿಂದ ಪೀಳಿಗೆಗೂ ಬದಲಾಗುತ್ತಿರುತ್ತದೆ. ವಿವಾಹ ಸಂಬಂಧವು ಮನುಷ್ಯನ ವೈಯಕ್ತಿಕ ಬೆಳವಣಿಗೆ ಮತ್ತು ಆಧ್ಯಾತ್ಮಿಕ ಮಟ್ಟ ಪ್ರಮುಖವಾಗಿದೆ. ಇದು ಮಾನವನಿಗೆ ಕರ್ಮಗಳ ಮೂಲಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಪರಿಪೂರ್ಣತೆಯನ್ನು ನೀಡುತ್ತದೆ. ವಿವಾಹವು ಮೂರು ಘಟ್ಟಗಳಲ್ಲಿ ಅಭಿವೃದ್ದಿ ಹೊಂದಲು ಸಹಕಾರಿಯಾಗಿದೆ -
1. ಭೌತಿಕ ಬೆಳವಣಿಗೆ 2
. ಬೌದ್ಧಿಕ ಬೆಳವಣಿಗೆ
3. ಮಾನಸಿಕ ಬೆಳವಣಿಗೆ.
ಈ ಮೂರು ಆಧಾರದ ಮೇಲೆ ಗಂಡು ಮತ್ತು ಹೆಣ್ಣಿನ ಅವಶ್ಯಕತೆಗಳು ಏನು ಎಂಬುದನ್ನು ಅಭ್ಯಸಿಸಬಹುದು. ಇದರಿಂದ ಅವರುಗಳ ಸಂಬಂಧದಲ್ಲಿ ಸುಧಾರಣೆಯನ್ನು ಕಂಡುಕೊಳ್ಳಬಹುದು.
ಪುರುಷ ಕುಂಡಲಿಯಲ್ಲಿ ಕುಜ ಮತ್ತು ಶುಕ್ರ
ಪುರುಷ ಕುಂಡಲಿಯಲ್ಲಿ ಶುಕ್ರವು ಆತ ಯಾರಿಗೆ ಆಕರ್ಷಿತರಾಗುತ್ತಾನೆಂಬುದನ್ನು ತಿಳಿಸಿದರೆ, ಕುಜವು ಹೆಣ್ಣಿನ ಜೊತೆಗೆ ವರ್ತನೆಯನ್ನು ತಿಳಿಸುತ್ತದೆ.
ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ
Comments