Skip to main content

ತೀರ್ಥ,ಸರ್ವವ್ಯಾಧಿ ನಿವಾರಕ.

ನೀವು ದೇವಸ್ಥಾನದಲ್ಲಿ ಅರ್ಚಕರು ಬೆಳ್ಳಿ ಅಥವಾ ತಾಮ್ರದ ಪಾತ್ರೆಯಲ್ಲಿ ತೀರ್ಥವನ್ನು ಕೊಡುವುದನ್ನು ಗಮನಿಸಿರಬಹುದು.ಎಂಟು ಘಂಟೆಗಳಿಗಿಂತಲೂ ಹೆಚ್ಚು ಶುದ್ಧನೀರು ಹಾಗೂ ತುಳಸಿ ಎಲೆಗಳು ಬೆಳ್ಳಿ ಅಥವಾ ತಾಮ್ರದ ಪಾತ್ರೆಯಲ್ಲಿದ್ದರೆ ಅದು ತ್ರಿದೋಷಗಳನ್ನು (ವಾತ,ಪಿತ್ಥ,ಕಫ) ನಿವಾರಿಸುವ ಔಷಧಿಯಾಗುತ್ತದೆ ಎನ್ನುತ್ತದೆ ಆಯುರ್ವೇದ. http://homeofayurveda.org/basil-an-incomparable-ayurvedic-herb/ ಅಸ್ಥಮಾ,ನೆಗಡಿ,ಕೆಮ್ಮು,ಶ್ವಾಸ ಹಾಗೂ ಹೃದಯಸಂಬಂಧಿಕಾಯಿಲೆಗಳನ್ನು ಹಾಗೂ ಇತ್ತೀಚಿನ ಮಾರಕ ರೋಗ ಡೆಂಗ್ಯೂವನ್ನೂ ಸಹ ತುಳಸಿಯ ಮೂಲಕ ನಿಯಂತ್ರಿಸಬಹುದೆಂದು ಆಯುರ್ವೇದ ತಿಳಿಸುತ್ತದೆ. ಪಚನಕ್ರಿಯೆಗೂ ತುಳಸಿ ಸಹಕಾರಿ.ಊಟದ ನಂತರ ತುಳಸಿ ಎಲೆಗಳನ್ನು ತಿಂದರೆ ಜೀರ್ಣಶಕ್ತಿಯ ಉದ್ದೀಪನವಾಗುತ್ತದೆಂದು ಆಯುರ್ವೇದ ಹೇಳಿದೆ.ಹಾಗಾಗಿ ತುಳಸಿನೀರಿನಿಂದ ತಯಾರಿಸಲ್ಪಟ್ಟ ತೀರ್ಥವೂ ಸಹ ಔಷಧಿಯೇ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಹಲವಾರು ವೈಜ್ಞಾನಿಕ ಸಂಶೋಧನೆಗಳಿಂದ ತಾಮ್ರ,ಬೆಳ್ಳಿ ಹಾಗೂ ಮಣ್ಣಿನ ಪಾತ್ರೆಗಳಲ್ಲಿ ಶೇಖರಿಸಿದ ನೀರು ಆರೋಗ್ಯಕ್ಕೆ ಪಥ್ಯಕರ ಎಂಬುದು ಸಾಬೀತಾಗಿದೆ. ತಾಮ್ರ ಅಥವಾ ಬೆಳ್ಳಿಯ ಪಾತ್ರೆಯಲ್ಲಿ ಶೇಖರಿಸಿದ ನೀರನ್ನು ಕುಡಿಯುವುದರಿಂದ ದೇಹದ ಮೇಲಾಗುವ ಪರಿಣಾಮಗಳನ್ನು ಅಮೇರಿಕದ ಒಂದು ವೈಜ್ಞಾನಿಕ ಸಂಸ್ಥೆ ಈ ರೀತಿ ತಿಳಿಸಿದೆ. Helps the digestive system perform better ಪಚನಕ್ರಿಯೆಯನ್ನು ಉತ್ತಮಗೊಳಿಸುತ್ತದೆ. Aids in weight loss ದೇಹದ ತೂಕದ ಪ್ರಮಾಣವನ್ನು ಇಳಿಸಲು ಸಹಕಾರಿ. Helps heal wounds faster ದೇಹದ ಮೇಲಿನ ಗಾಯವನ್ನು ಬೇಗ ಗುಣಪಡಿಸುತ್ತದೆ. Helps maintain cardiovascular health and beats hypertension ಹೃದಯ ಸಂಬಂಧಿ ಕಾಯಿಲೆಗಳನ್ನು ನಿಯಂತ್ರಿಸುತ್ತದೆ. Can kill bacteria ನೀರಿನಲ್ಲಿರುವ ವಿಷಾಣುಗಳನ್ನು ಕೊಲ್ಲುತ್ತದೆ. Regulates the working of the thyroid gland ಥೈರಾಡ್ ಸಮಸ್ಯೆಗಳನ್ನು ನಿವಾರಿಸುತ್ತದೆ. Skin health and melanin production ಚರ್ಮ ಆರೋಗ್ಯಕರವಾಗಿರುವಂತೇ ಮಾಡುತ್ತದೆ. ಹಾಗೇ, ಶಂಖದಲ್ಲಿಟ್ಟ ನೀರನ್ನು ತೀರ್ಥಕ್ಕೆ ಬಳಸುತ್ತಾರೆ.ಆಯುರ್ವೇದದ ಪ್ರಕಾರ ಶಂಖದಲ್ಲಿ ೧೦ ಘಂಟೆ ಇಟ್ಟಂತಹ ನೀರಿಗೆ ಅನೇಕ ಔಷಧೀಯ ಗುಣಗಳಿರುತ್ತವೆ.ಇದು ಹೊಟ್ಟೆನೋವು,ತಲೆನೋವು,ಅಜೀರ್ಣತೆ,ದೃಷ್ಟಿ ಸಂಬಂಧಿ,ಚರ್ಮಸಂಬಂಧಿ ದೋಷಗಳನ್ನು ನಿವಾರಿಸುತ್ತದೆ.ಇದರ ಜೊತೆ ದೇವರ ಕಲ್ಲಿನ ಪ್ರತಿಮೆ ಅಥವಾ ಪಂಚಲೋಹವಿಗ್ರಹದ ಮೇಲೆ ಅಭಿಷೇಕ ಮಾಡಿದ ನೀರನ್ನೂ ಸಹ ತೀರ್ಥಕ್ಕೆ ಸೇರಿಸುವುದರಿಂದ ಪ್ರತಿಮೆಯಲ್ಲಿರುವ ಅನೇಕ ಸಕಾರಾತ್ಮಕ ಅಂಶಗಳೂ ತೀರ್ಥದೊಂದಿಗೆ ಸೇರುತ್ತವೆ. ತುಳಸಿ,ತಾಮ್ರ ಅಥವಾ ಬೆಳ್ಳಿ ಪಾತ್ರೆಯಲ್ಲಿನ ನೀರು, ಶಂಖದ ನೀರು,ದೇವರ ವಿಗ್ರಹದ ನೀರು, ಈ ಎಲ್ಲವುಗಳ ಸಮ್ಮಿಶ್ರಣ ತೀರ್ಥ.ಹಾಗಾಗಿ ತೀರ್ಥವೂ ಸಹ ಔಷಧಿಯೇ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಪ್ರಾರ್ಥನೆಗಳೊಂದಿಗೆ ತೀರ್ಥವನ್ನು ಸೇವಿಸಿದರೊಳಿತು.. ಶಂಖಮಧ್ಯೇ ಸ್ಥಿತಂ ತೋಯಂ ಭ್ರಮಿತಂ ಕೇಶವೋಪರಿ | ಅನ್ನಲಗ್ನಂ ಮನುಷ್ಯಾಣಾಂ ಪಾತಕಾನಿ ವ್ಯಪೋಹತಿ || ಅಕಾಲಮೃತ್ಯುಹರಣಂ ಸರ್ವವ್ಯಾಧಿ ನಿವಾರಣಮ್ | ಸರ್ವಪಾಪೋಪಶಮನಂ ವಿಷ್ಣುಪಾದೋದಕಂ ಶುಭಮ್ || ಶರೀರೇ ಜರ್ಜರೀ ಭೂತೇ ವ್ಯಾಧಿಗ್ರಸ್ತೇ ಕಲೇವರೇ | ಔಷಧೀ ಜಾಹ್ನವೀ ತೋಯಂ ವೈದ್ಯೋ ನಾರಾಯಣೋ ಹರಿಃ || ಇದು ತೀರ್ಥಪ್ರಾಶನದ ಮಹತ್ವ.ಹಾಗಾಗಿ ತೀರ್ಥಪ್ರಾಶನವೆಂದರೆ ಮೌಢ್ಯವಲ್ಲ.ಮೂಢನಂಬಿಕೆಯೂ ಅಲ್ಲ.ಅದಕ್ಕೊಂದು ವೈಜ್ಞಾನಿಕ ಹಿನ್ನೆಲೆಯಿದೆಯೆಂದು ಕಂಡು ಬರುತ್ತದೆ. ಲೋಕಾಃ ಸಮಸ್ತಾಃ ಸುಖಿನೋ ಭವಂತು.

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ