Skip to main content

Posts

Showing posts from September, 2016

"ದೇವರ ಮನೆ ಮತ್ತು ಪೂಜೆ" ಯ ವಿಷಯಗಳು..

೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ.. ೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ವಿಗ್ರಹಗಳು, ಫೋಟೋಗಳು, ಯಂತ್ರಗಳು ಇಡಬೇಡಿ.. ೩. ದೇವರ ಮನೆಯಲ್ಲಿ ಗುಡಿಸೋ ಕಸವನ್ನು ಒಂದು ಬಟ್ಟೆಯಿಂದ ಗುಡಿಸಿದರೆ ತುಂಬಾ ಒಳ್ಳೆಯದು. ೪. ದೇವರ ಮನೆಯನ್ನು ಅರಿಸಿನ ಹಾಕಿದ ನೀರಿನಿಂದ ಶುದ್ಧ ಮಾಡಿ, ಆ ಮನೆಯಲ್ಲಿ ದೈವಕಳೆ ವೃದ್ಧಿಸಿ, ಹಣದ ಸಮಸ್ಯೆ ನಿವಾರಣೆಯಾಗುತ್ತದೆ, ನೆಲ ಒಣಗುವವರೆಗೂ ತುಳಿಯುವ ಹಾಗಿಲ್ಲ.. ೫. ದೇವರ ಮನೆಯಲ್ಲಿ ತುಂಬಾ ವಿಗ್ರಹಗಳು ಬೇಡ, ವಿಗ್ರಹಗಳು ಜಾಸ್ತಿಯಾದರೆ "ನೈವೇದ್ಯ "ದ ಪ್ರಮಾಣವೂ ಜಾಸ್ತಿ ಮಾಡಬೇಕಾಗುವುದು.. ೬. ತುಂಬಾ ಎತ್ತರದ ವಿಗ್ರಹಗಳು ಬೇಡ, ಅಕಸ್ಮಾತ್ತಾಗಿ ಇದ್ದರೆ ಪ್ರತಿದಿನ ಒಂದು ಸೇರು ಅಕ್ಕಿಯ ಅನ್ನವನ್ನಾದರೂ ನೈವೇದ್ಯ ಮಾಡಬೇಕಾಗುವುದು.. ೭. ದೇವರ ವಿಗ್ರಹಗಳನ್ನು ಮಂಗಳವಾರ, ಶನಿವಾರ , ಶುಕ್ರವಾರದಂದು ಶುದ್ಧಿ ಮಾಡುವುದು ಬೇಡ.. (ಅನಿವಾರ್ಯ ಪರಿಸ್ಥತಿಗಳಲ್ಲಿ, ಗ್ರಹಣ ಕಾಲದಲ್ಲಿ, ಇತ್ಯಾದಿ ಸಮಯದಲ್ಲಿ ಮಾಡಬಹುದು) ೮. ಪ್ರತೀ ಅಮಾವಾಸ್ಯೆ ಮತ್ತು ಪೌರ್ಣಾಮಿಯ ಮರುದಿನ ದೇವರ ವಿಗ್ರಹಗಲಕನ್ನು "ಅರಿಸಿನದ ನೀರಿನಿಂದ ಶುದ್ಧ ಮಾಡಿ.. ೯. ದೇವರ ಪೂಜೆಗೆ "ಆಂಜನೇಯ" ಸ್ವಾಮಿ ಇರೋ ಘಂಟೆಯನ್ನೇ ಉಪಯೋಗಿಸಿ, ಆಂಜನೇಯ ದೇವರ ಪಾದವನ್ನು ಹಿಡಿದು ಘಂಟೆಬಾರಿಸಬೇಕು.. ೧೦. ದೇವರುಗಳು ಯಾವಾಗಲೂ ಆಹಾರ ಕೇಳುತ್ತಿರುತ್ತವ