Skip to main content

ಜಾತಕದಲ್ಲಿ ಪಾಪಗ್ರಹದ ಫಲ

ಜಾತಕದಲ್ಲಿ ಪಾಪಗ್ರಹದ ಫಲ * ಮೂಲ್ಕಿ ಹರಿಶ್ಚಂದ್ರ ಪಿ. ಸಾಲಿಯಾನ್ ಗ್ರಹದೋಷದಿಂದ ಜನ ತೊಂದರೆ ಅನುಭವಿಸುತ್ತಾರೆ. ಉದ್ಯೋಗದಲ್ಲಿ ಸಮಸ್ಯೆ, ಅಪಮಾನ, ವೈರಿಕಾಟ ಆಗುತ್ತದೆ. ಸುತ್ತಲಿರುವ ಜನರಿಂದ ತೊಂದರೆ, ವಿನಾಕಾರಣ ಅಪವಾದಗಳು ಬರುತ್ತವೆ. ಗ್ರಹದೋಷ ಅಪಕೀರ್ತಿ ಹಾಗೂ ಕೆಲ ವೇಳೆ ಆಯುಷ್ಯಕ್ಕೂ ಕಂಟಕವಾಗುತ್ತದೆ. ವ್ಯಯ ಸ್ಥಾನದಲ್ಲಿ ಶನಿ, ರಾಹು ಯಾವುದಾದರೂ ಒಂದು ಗ್ರಹ ಇದ್ದರೂ, ಇವರಿಗೆ ದಾರಿದ್ರ್ಯ ಯೋಗವಾಗುತ್ತದೆ. ಇಂತಹವರಿಗೆ ಜೀವನ ಪೂರ್ತಿ ಬಡತನ ಬರುತ್ತದೆ. ವ್ಯಯ ಸ್ಥಾನದಲ್ಲಿ ಶನಿಯು ಬಹಳ ಕೆಟ್ಟ ಫಲವನ್ನು ಕೊಡುತ್ತದೆ. ಇಂತಹವರಿಗೆ ಅಧಿಕಾರದಲ್ಲಿ ತೊಂದರೆಯಾಗುತ್ತದೆ. ಇತರ ಕೆಲಸಗಳಲ್ಲಿ ಅಡೆತಡೆಯಾಗಿ ಕೆಲಸವನ್ನೇ ಕಳಕೊಳ್ಳುವ ಪ್ರಸಂಗವೂ ಬರಬಹುದು. ಶನಿ ಮಂಗಳದಿಂದ ಪಾಪಗ್ರಹಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪ್ರಬಲರಾಗಿದ್ದರೆ ಇವರು ಯಾವುದಾದರೂ ಪ್ರಕರಣದಲ್ಲಿ ಸಿಲುಕಿ ಬಂಧನಕ್ಕೆ ಒಳಗಾಗುತ್ತಾರೆ. ವ್ಯಯ ಸ್ಥಾನದಲ್ಲಿ ರವಿಯು ಯಾವುದೇ ಕೆಲಸವನ್ನು ಸರಿಯಾಗಿ ಮಾಡಲು ಬಿಡದೆ ಅರ್ಧಕ್ಕೆ ನಿಂತು ಹೋಗುವಂತೆ ಮಾಡುತ್ತದೆ. ವ್ಯಯ ಸ್ಥಾನದಲ್ಲಿ ಮಂಗಳನಿದ್ದರೆ ಇಂತಹವರ ಹೆಂಡತಿ ಮರಣ ಹೊಂದುತ್ತಾರೆ. ಗ್ರಹಗಳಿಗೆ ಸ್ಥಾನ ರಾಶಿ ಮತ್ತು ಯೋಗ ಹೀಗೆ ನಾಲ್ಕು ಬಗೆಯ ಫಲಗಳು ಇರುವವು. ಮೇಲಿನ ವರದಿಂದ ಸ್ಥಾನ ಬಲದ ಫಲ, ಪಾಪಗ್ರಹಗಳ ರಾಶಿಯಲ್ಲಿ ಪಾಪಗ್ರಹಗಳ ಫಲವು ಬಹಳ ತೀಕ್ಷ್ಣ ರೀತಿಯಿಂದ ಇರುತ್ತದೆ. ಕುಂಡಲಿಯಲ್ಲಿ ಕೇಂದ್ರದಲ್ಲಿರುವ ಗ್ರಹಗಳ ಫಲವು ಹೆಚ್ಚಾಗಿ ದೊರೆಯುವುದು. ತ್ರಿಕೋಣದಲ್ಲಿಯ ಗ್ರಹಗಳ ಫಲವು ಮೇಲಿನ ಫಲಕ್ಕಿಂತ ಕಡಿಮೆ. ಅಷ್ಟಮ ಮತ್ತು ವ್ಯಯ ಸ್ಥಾನದಲ್ಲಿಯ ಫಲವು ಸಾಮಾನ್ಯ ಕುಂಡಲಿಯಲ್ಲಿ ಗ್ರಹವು ಸ್ವಾತಂತ್ರ್ಯ ಇದ್ದಷ್ಟು ಫಲ ಜಾಸ್ತಿ ಕೊಡುವುದು. ಇಂತಹ ಗ್ರಹಗಳು ಇನ್ನೊಂದು ಗ್ರಹದೊಂದಿಗೆ ಇಲ್ಲದಿರುವುದು ಮತ್ತು ಇತರ ಗ್ರಹಗಳ ದಷ್ಟಿ ಇಲ್ಲದೆ ಇರುವುದು. ಇದು ಸ್ವತಂತ್ರ ಗ್ರಹವಾಗುತ್ತದೆ. ವಕ್ರ ಗ್ರಹದ ಫಲವು ವಕ್ರವಾಗಿರುತ್ತದೆ. ಅಸ್ತಂಗತ ಗ್ರಹಗಳ ಫಲವು ಸಿಗುವುದಿಲ್ಲ. ಕುಂಡಲಿಯಲ್ಲಿ ಬಲಿಷ್ಠ ಗ್ರಹ ಯಾವುದು ಇರುತ್ತದೆಯೋ ಅದಕ್ಕೆ ಅನುಗುಣವಾಗಿ ಫಲ ಕೊಡುತ್ತದೆ. ಕುಂಡಲಿಯಲ್ಲಿ ದ್ವಾದಶ ಸ್ಥಾನಗಳಲ್ಲಿ ಮತ್ತು ಆಯಾ ಭಾಗಗಳಲ್ಲಿ ಯಾವ ಅಂಶವು ವಿಧಿತವಿರುವುದೋ ಮತ್ತು ಆ ಅಂಶದ ಸಮೀಪದಲ್ಲಿ ಯಾವ ಗ್ರಹ ಇರುವುದೋ, ಆ ಗ್ರಹದ ಫಲವು ಇಡೀ ಆಯುಷ್ಯದಲ್ಲಿ ದೊರೆಯುವುದು. ಒಂದೇ ಮನೆಯಲ್ಲಿ ಅನೇಕ ಗ್ರಹಗಳಿದ್ದರೆ ಪ್ರತಿಯೊಂದು ಗ್ರಹದ ಫಲವು ಆ ಗ್ರಹಗಳ ಯೋಗ ಕಾಲವು ಬರುವವರೆಗೆ ಅದರ ಫಲವು ಸಿಗುವುದಿಲ್ಲ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...