Skip to main content

ಶ್ರೀನವಗ್ರಹ ಸ್ತೊತ್ರಮ್ (ಶ್ರೀವೇದವ್ಯಾಸವಿರಚಿತ)

ಪ್ರಸಿದ್ಧವಾದ ಶ್ರೀವೇದವ್ಯಾಸ ವಿರಚಿತವಾದ ನವಗ್ರಹ ಸ್ತೋತ್ರವನ್ನು ಫಲಜ್ಯೋತಿಷ್ಯದಲ್ಲಿ ಸಾದರ ಪಡಿಸಲು ಬಹಳ ಸಂತೋಷವಾಗುತ್ತಿದೆ. ಪ್ರಾಯಶಃ ಎಲ್ಲ ನವಗ್ರಹ ಸ್ತೋತ್ರಗಳಲ್ಲಿಯೇ ಈ ಸ್ತೋತ್ರ ಬಹಳ ಪ್ರಚಾರದಲ್ಲಿರುವುದೇ ಜನಮಾನ್ಯರಲ್ಲಿ ಇದರ ಪ್ರಸಿದ್ಧಿಗೆ ಕಾರಣ. ಇಲ್ಲಿ ಪ್ರತಿಯೊಂದು ಗ್ರಹವನ್ನು ಸುಂದರವಾಗಿ ಸ್ತುತಿಸಲಾಗಿದೆ. ಅತ್ಯಂತ ಮತ್ತು ಶೀಘ್ರ ಪ್ರಭಾವಕಾರೀ ಮಂತ್ರಗಳನ್ನೊಳಗೊಂಡ ಈ ಸ್ತೋತ್ರವನ್ನು ನಿತ್ಯ ಪಾರಾಯಣಮಾಡಬೇಕು. ಸ್ತೋತ್ರದ ಫಲಶ್ರುತಿಯಲ್ಲಿ ಹೇಳಿರುವಂತೆ ಹಗಲಾಗಲಿ ರಾತ್ರಿಯಾಗಲಿ ಯಾವಾಗಲಾದರೂ ಈ ಸ್ತೋತ್ರವನ್ನು ಪಠಿಸಿ ವಿಘ್ನಗಳಿಂದ ಮುಕ್ತಿ ಹೊಂದಬಹುದು. ನವಗ್ರಹ ಜಪಗಳನ್ನು ಮಾಡುವಾಗ ಈ ಸ್ತೋತ್ರದಲ್ಲಿ ಕೊಡಲಾದ ಆಯಾ ಗ್ರಹದ ಮಂತ್ರವನ್ನೇ ಜಪಸಂಖ್ಯಾನುಸಾರ ಜಪ ಮಾಡುವುದು ಹೆಚ್ಚು ಪ್ರಶಸ್ತ. ಶ್ರೀನವಗ್ರಹ ಸ್ತೊತ್ರಮ್ (ಶ್ರೀವೇದವ್ಯಾಸವಿರಚಿತ) ಶ್ರೀಗಣೇಶಾಯನಮಃ || ಅಸ್ಯ ಶ್ರೀನವಗ್ರಹಸ್ತೋತ್ರಮಂತ್ರಸ್ಯ ವೇದವ್ಯಾಸ ಋಷಿಃ | ಅನುಷ್ಟುಪ್ ಛಂದಃ | ಮಮ ಗ್ರಹಾನುಕೂಲ್ಯಾರ್ಥೇ ನವಗ್ರಹಸ್ತೋತ್ರ ಜಪೇ (ಪಾರಾಯಣೇ) ವಿನಿಯೋಗಃ || ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹದ್ಯುತಿಮ್ | ತಮೋಽರಿಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ || ೧ || ದಧಿಶಂಖತುಷಾರಾಭಂ ಕ್ಷೀರೋದಾರ್ಣವ ಸಂಭವಮ್ | ನಮಾಮಿ ಶಶಿನಂ ಸೋಮಂ ಶಂಭೊರ್ಮುಕುಟ ಭೂಷಣಮ್ || ೨ || ಧರಣಿ ಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಮ್ | ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್ || ೩ || ಪ್ರಿಯಂಗುಕಲಿಕಾಶ್ಯಾಮಂ ರೂಪೇಣಾಂ ಪ್ರತಿಮಂ ಬುಧಮ್ | ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ || ೪ || ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನ ಸನ್ನಿಭಮ್ | ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ || ೫ || ಹಿಮಕುಂದಮೃಣಾಲಾಭಮ್ ದೈತ್ಯಾನಾಂ ಪರಮಂ ಗುರುಮ್ | ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ || ೬ || ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ | ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್ || ೭ || ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ದನಮ್ | ಸಿಂಹಿಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ || ೮ || ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಮ್ | ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ || ೯ || ಇತಿ ವ್ಯಾಸಮುಖೋದ್‍ಗೀತಂ ಯಃ ಪಠೇತ್ ಸುಸಮಾಹಿತಃ | ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿರ್ಭವಿಷ್ಯತಿ || ೧೦ || ನರನಾರೀನೃಪಾಣಾಂ ಚ ಭವೆದ್ದುಃಸ್ವಪ್ನನಾಶನಮ್ | ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿವರ್ಧನಮ್ || ೧೧ || ಗೃಹನಕ್ಷತ್ರಜಾಃ ಪೀಡಾಸ್ತಸ್ಕರಾಗ್ನಿ ಸಮುದ್‌ಭವಾಃ | ತಾಃ ಸರ್ವಾಃ ಪ್ರಶಮಂ ಯಾಂತಿ ವ್ಯಾಸೋಬ್ರೂತೇ ನ ಸಂಶಯಃ || ೧೨ || || ಇತಿ ಶ್ರೀವೇದವ್ಯಾಸವಿರಚಿತ ನವಗ್ರಹಸ್ತೋತ್ರಂ ಸಂಪೂರ್ಣಮ್ ||

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ...