ವರಮಹಾಲಕ್ಷ್ಮಿ ವ್ರತ
ಈ ದಿನ ಬೆಳಿಗ್ಗೆ ಎದ್ದು ಮಂಗಳ ಸ್ನಾನ ಮಾಡಬೇಕು. ವ್ರತ ಮಾಡುವವರು ಕಲಶ ಸ್ಥಾಪನೆ ಮಾಡಬೇಕು. ಪೂಜೆ ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ ಪದ್ಮದ ರಂಗವಲ್ಲಿ ಹಾಕಬೇಕು. ಇದರ ಮೇಲೆ ಕಲಶ ಸ್ಥಾಪಿಸಬೇಕು. ಒಂದು ಚೊಂಬಿನಲ್ಲಿ ಸ್ವಲ್ಪ ನೀರು/ಅಕ್ಕಿ ಹಾಕಿ, ಜೊತೆಗೆ ಅರಿಶಿನದ ಗೊನೆ, ಅಡಿಕೆ, ಬೆಳ್ಳಿ ನಾಣ್ಯ / ಯಾವುದೇ ನಾಣ್ಯ(coin) ಹಾಕಿ.ಅದರ ಮೇಲೆ ಅರಿಶಿನ ಕುಂಕುಮ ಸವರಿದ ತೆಂಗಿನಕಾಯಿ ಇಟ್ಟು, ಇದರ ಮೇಲೆ ಮುಖದ ಆಕಾರದ ಚಿತ್ರ ಬರೆಯಬಹುದು ಅಥವಾ ಲಕ್ಷ್ಮಿ ದೇವಿಯ ಬೆಳ್ಳಿಯ ಮುಖವಾಡ ಇದ್ದರೆ ಅದನ್ನು ಈ ತೆಂಗಿನಕಾಯಿಗೆ ಜೋಡಿಸಿ. ಕಳಶದ ಬಾಯಿಗೆ ವೀಳ್ಯದ ಎಲೆ , ಮಾವಿನ ಎಲೆಗಳನ್ನು ಇಡಬೇಕು. ಈ ಕಳಶವನ್ನು ಅಕ್ಕಿ ಹರಡಿರುವ ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನು ಅಷ್ಟದಳ ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ವಡವೆ ಹಾಕಿ ಅಲಂಕಾರ ಮಾಡಬಹುದು. ಈ ಕಲಶಕ್ಕೆ ಶ್ರೀ ಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲಶವನ್ನು ಪೂಜೆ ಮಾಡಬೇಕು
ಪೂಜಾ ವಿಧಾನ
ಪೂಜೆ ಎಂದರೆ ಹಲವಾರು ವಿಧಿ-ವಿಧಾನಗಳು, ಮಂತ್ರಗಳು ,ಇವುಗಳ ತಲೆ-ಬುಡ ಗೊತ್ತಿಲ್ಲ ಅಂತ ಪೇಚಾಡುತ್ತ ಇದ್ದೀರಾ. ಈ ಗೊಂದಲದಲ್ಲಿ ಸಿಕ್ಕಿ ಹಾಕಿಕೊಳ್ಳ ಬೇಕಿಲ್ಲ. ಪೂಜಾ ವಿಧಾನವನ್ನು ಸರಳವಾಗಿ ವಿವರಿಸಬಹುದು. ದೇವರ ಪೂಜೆಯನ್ನು ಅತಿಥಿ ಸತ್ಕಾರಕ್ಕೆ ಹೋಲಿಸಿಕೊಳ್ಳಿ . ದೇವರು ನಿಮ್ಮ ಮನೆಗೆ ಬಂದಿರುವ ಅತಿಥಿ. ಅತಿಥಿಗಳಿಗೆ ಹೇಗೆ ಉಪಚಾರ ಮಾಡುತ್ತಿರೋ , ಹಾಗೆಯೆ ದೇವರಿಗೆ ಪೂಜೆ ರೂಪದಲ್ಲಿ ಉಪಚಾರ ಮಾಡಬೇಕು ಅಷ್ಟೆ.
ಮೊದಲು ಸಂಕಲ್ಪ ಮಾಡಿ, ನಂತರ ಧ್ಯಾನ ಮಾಡಿ ದೇವರನ್ನು ಆಹ್ವಾನ ಮಾಡುವುದು.
ಸಂಕಲ್ಪ - ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ ಮಾಡುವುದೇ ಸಂಕಲ್ಪ. ಸಂಕಲ್ಪ ಮಾಡುವಾಗ ಆ ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ, ನಕ್ಷತ್ರವನ್ನು ಹೆಸರಿಸಬೇಕು
ಶುಭೇ ಶೋಭನೇ ಮುಹೂರ್ತೇ ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ವೇತ ವರಾಹ ಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಜಂಬೋ ದ್ವೀಪೇ ಭರತವರ್ಷೇ ಭರತಖಂಡೇ ಗೋದಾವರ್ಯಾಃ ದಕ್ಷಿಣೇ ತೀರೇ ಶಾಲೇವಾಹನಶಖೇ ಬೌದ್ಧಾವತಾರೇ ರಾಮಕ್ಷೇತ್ರೇ ಅಸ್ಮಿನ್ ವರ್ತಮಾನೇ ವ್ಯಾವಹಾರಿಕೇ ಚಾಂದ್ರಮಾನೇ ಪ್ರಭವಾದಿ ಷಷ್ಟಿ ಸಂವತ್ಸರಾಣಾಂ ಮಧ್ಯೇ .....ನಾಮ ಸಂವತ್ಸರೇ, ಉತ್ತರಾಯನೇ/ದಕ್ಷಿಣಾಯನೇ ,... ಋತೌ , .... ಮಾಸೇ ,ಶುಕ್ಲ/ಕೃಷ್ಣ ಪಕ್ಷೇ , ... ತಿಥಿಯಾಂ , ... ವಾಸರ ಯುಕ್ತಾಯಾಂ , ಶುಭ ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ ವಿಶೇಷಣ ವಿಶಿಷ್ಟಾಯಾಂ ಶುಭತಿಥೌ , ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ ವಿಜಯ ವೀರ್ಯ ಅಭಯ ಆಯುರಾರೋಗ್ಯ ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ ದುರಿತೋಪಶಾಂತ್ಯರ್ಥಂ ಸಮಸ್ತ ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ ಪುರುಷಾರ್ಥ ಸಿಧ್ಧ್ಯರ್ಥಂ ಶ್ರೀ ....(ದೇವರ ಹೆಸರು) ಪ್ರೀತ್ಯರ್ಥಂ ಯಾವಚ್ಛಕ್ತಿ ಧ್ಯಾನಾವಾಹನಾದಿ ಷೋಡಶೋಪಚಾರ ಪೂಜಾಂ ಕರಿಷ್ಯೇ.
ಧ್ಯಾನ - ನೀವು ಪೂಜೆ ಮಾಡುತ್ತಿರುವ ದೇವರನ್ನು ಭಕ್ತಿಯಿಂದ ಧ್ಯಾನ ಮಾಡಿ ಆವಾಹನೆ ಮಾಡುವುದು.
ಸಾಮಾನ್ಯವಾಗಿ ಷೋಡಶೋಪಚಾರದಿಂದ ಪೂಜೆ ಮಾಡಿ ಅಂತ ನೀವು ಕೇಳಿರಬಹುದು. ಷೋಡಶ ಅಂದರೆ 16. ಹದಿನಾರು ಬಗೆಯಿಂದ ದೇವರಿಗೆ ಉಪಚಾರ ಮಾಡಿ ಎಂದರ್ಥ. ಇವುಗಳ ವಿವರ ಕೆಳಗಿದೆ:
1.ಆವಾಹನೆ - ಅಂದರೆ ಆಹ್ವಾನ . ದೇವರನ್ನು ನಿಮ್ಮ ಮನೆಗೆ ಅಥವಾ ಪೂಜೆ ಮಾಡುತ್ತಿರುವ ಜಾಗಕ್ಕೆ ಆಹ್ವಾನ ಮಾಡುವುದು.
2.ಆಸನ - ಅಂದರೆ ಕುಳಿತುಕೊಳ್ಳುವ ಜಾಗ . ದೇವರ ಪ್ರತಿಮೆಯನ್ನು ಇಡುವ ವೇದಿಕೆ/ ಮಣೆ ಮೇಲೆ ಆಸೀನ ಮಾಡಿಸುವುದು.
3.ಪಾದ್ಯ - ಕಾಲು ತೊಳೆದುಕೊಳ್ಳುವುದಕ್ಕೆ ನೀರು ಕೊಡುವುದು.
4.ಅರ್ಘ್ಯ - ಕೈ ತೊಳೆದುಕೊಳ್ಳುವುದಕ್ಕೆ ನೀರು ಕೊಡುವುದು.
5.ಆಚಮನ - ಕುಡಿಯುವುದಕ್ಕೆ ನೀರು ಕೊಡುವುದು.
6.ಸ್ನಾನ - ಶುದ್ಧೋದಕ (ನೀರು) ಮತ್ತು ಪಂಚಾಮೃತದಿಂದ ಸ್ನಾನ ಮಾಡಿಸುವುದು.
7.ವಸ್ತ್ರ - ಧರಿಸಲು ಉಡುಪು ಕೊಡುವುದು . ಗೆಜ್ಜೆವಸ್ತ್ರಗಳನ್ನೂ ದೇವರಿಗೆ ಇಡುವುದು . ಜೊತೆಗೆ ಉಪವೀತ (ಜನಿವಾರ), ಆಭರಣವನ್ನು (ಬಳೆ-ಬಿಚ್ಚೋಲೆ )ಸಮರ್ಪಿಸುವುದು.
8.ಹರಿದ್ರ, ಕುಂಕುಮ, ಗಂಧ, ಅಕ್ಷತ - ಅರಿಶಿನ , ಕುಂಕುಮ, ಶ್ರೀಗಂಧ , ಮಂತ್ರಾಕ್ಷತೆಯನ್ನು ದೇವರಿಗೆ ಅರ್ಪಿಸುವುದು.
9.ಪುಷ್ಪ ಮಾಲ - ಹೂವು, ಪತ್ರೆಗಳಿಂದ ದೇವರಿಗೆ ಅಲಂಕಾರ ಮಾಡುವುದು.
10. ಅರ್ಚನೆ/ಅಷ್ಟೋತ್ತರ - ನೂರೆಂಟು ನಾಮಗಳಿಂದ ದೇವರನ್ನು ಸ್ಮರಣೆ ಮಾಡುವುದು.
11.ಧೂಪ - ಪರಿಮಳಯುಕ್ತವಾದ ಧೂಪವನ್ನು ಅರ್ಪಿಸುವುದು.
12.ದೀಪ - ದೀಪ ಸಮರ್ಪಣೆ ಮಾಡುವುದು.
13.ನೈವೇದ್ಯ, ತಾಂಬೂಲ - ದೇವರಿಗೆ ವಿಧ ವಿಧ ಭಕ್ಷ್ಯಗಳ ಭೋಜನ ಅರ್ಪಿಸುವುದು . ಊಟದ ನಂತರ ವೀಳೆಯ, ಅಡಿಕೆ, ತೆಂಗಿನಕಾಯಿ ತಾಂಬೂಲ ಕೊಡುವುದು.
14. ನೀರಾಜನ - ಕರ್ಪುರದಿಂದ ಮಂಗಳಾರತಿ ಮಾಡುವುದು.
15. ನಮಸ್ಕಾರ - ಪ್ರದಕ್ಷಿಣೆ ಮಾಡಿ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದು.
16. ಪ್ರಾರ್ಥನೆ - ನಿಮ್ಮ ಇಷ್ಟಗಳನ್ನು ನಡೆಸಿ ಕೊಡು ಎಂದು ದೇವರಲ್ಲಿ ಅರಿಕೆ / ಪ್ರಾರ್ಥನೆ ಮಾಡುವುದು. ಪೂಜೆಯ ನಂತರದೇವರು ಅನುಗ್ರಹಿಸಿರುವ ಅರಿಶಿನ, ಕುಂಕುಮ, ನೈವೇದ್ಯವನ್ನು ಪ್ರಸಾದ ರೂಪವಾಗಿ ಸ್ವೀಕಾರ ಮಾಡುವುದು.
ಹೀಗೆ ಕ್ರಮವಾಗಿ ಪೂಜೆ ಮಾಡಿ ದೇವರನ್ನು ಸಂತೃಪ್ತಿ ಪಡಿಸಿದರೆ, ಭಗವಂತನು ತನ್ನ ಕೃಪೆಯನ್ನು ನಮ್ಮ ಮೇಲೆ ಅಪಾರವಾಗಿ ಅನುಗ್ರಹಿಸುತ್ತಾನೆ :)
ಪೂಜಾ ಸಾಮಾಗ್ರಿ
ಪೂಜೆ ಶುರು ಮಾಡುವ ಮುನ್ನ , ಅಲಂಕಾರ, ಅಣಿ ಮಾಡಿಕೊಳ್ಳಕ್ಕೆ ಸುಮಾರು ಹೊತ್ತು ಆಗುತ್ತೆ. ಪೂಜೆ ಅಂದರೆ ಎಷ್ಟೊಂದು ಸಾಮಗ್ರಿ ಉಪಯೋಗಿಸುತ್ತೀವಿ , ಪೂಜೆ ಮಾಡೋ ಸಡಗರದಲ್ಲಿ ಕೆಲವೊಮ್ಮೆ ಒಂದೆರಡು ಸಾಮಾನು ಮರೆಯುವ ಸಾಧ್ಯತೆಗಳು ಇದೆ :) ಹೀಗೆ ಆಗದೆ ಇರಲಿ ಅಂತ ಪೂಜಾ ಸಾಮಾನುಗಳ ಒಂದು ಪಟ್ಟಿಯನ್ನು ಮಾಡಿದ್ದೀನಿ.
ಸಾಮನ್ಯವಾಗಿ ಎಲ್ಲ ಪೂಜೆಗಳಿಗೂ ಉಪಯೋಗಿಸುವ ಸಾಮಗ್ರಿಗಳು:
ರಂಗೋಲಿ, ಮಣೆ / ಮಂಟಪ ,ದೇವರ ವಿಗ್ರಹ, ದೇವರ ಪಟ ,ನಂದಾ ದೀಪ, ದೀಪದ ಕಂಭ, ತುಪ್ಪ, ಎಣ್ಣೆ, ದೀಪಕ್ಕೆ ಹಾಕುವ ಹತ್ತಿ ಬತ್ತಿ
ಘಂಟೆ, ಪಂಚಪಾತ್ರೆ, ಉದ್ದರಣೆ, ಅರ್ಘ್ಯ ಪಾತ್ರೆ, ನೀರು ,ಪೂಜಾ ವಿಧಾನ ಇರುವ ಪುಸ್ತಕ /ಕ್ಯಾಸೆಟ್ / ಸಿ.ಡಿ.
ಅರಿಶಿನ, ಕುಂಕುಮ, ಮಂತ್ರಾಕ್ಷತೆ , ಶ್ರೀಗಂಧ, ಊದಿನ ಕಡ್ಡಿ ,ಹೂವು, ಪತ್ರೆ, ಗೆಜ್ಜೆ ವಸ್ತ್ರ
ಪಂಚಾಮೃತ - ಹಾಲು, ಮೊಸರು, ಸಕ್ಕರೆ, ತುಪ್ಪ, ಜೇನುತುಪ್ಪ
ವೀಳ್ಯದ ಎಲೆ, ಅಡಿಕೆ, ಹಣ್ಣು , ತೆಂಗಿನಕಾಯಿ ,ನೈವೇದ್ಯ - ಪಾಯಸ, ಹುಗ್ಗಿ, ಅನ್ನ, ಕೋಸಂಬರಿ , ಇತ್ಯಾದಿ ,ಹಲಗಾರತಿ, ಕರ್ಪೂರ, ಮಂಗಳಾರತಿ ಬತ್ತಿ ,ಆರತಿ ತಟ್ಟೆ, ಸೊಡಲು, ಹೂಬತ್ತಿ, ,
ಕೆಲವು ಪೂಜೆಗಳಲ್ಲಿ ಅಧಿಕವಾಗಿ ಇನ್ನಷ್ಟು ಸಾಮಗ್ರಿಗಳನ್ನು ಉಪಯೋಗಿಸುತ್ತೀವಿ :
ಕಳಶ, ಅರಿಶಿನದ ಕೊನೆ, ಜನಿವಾರ, ಅರಿಶಿನ ದಾರ ,ಮರದ ಜೊತೆ / ಬಾಗಿನ ಬಳೆ, ಬಿಚ್ಚೋಲೆ, ಕನ್ನಡಿ, ಕಪ್ಪು, ರವಿಕೆ ಬಟ್ಟೆ ,ಸೋಬಲಕ್ಕಿ, ಉಪಾಯನ ದಾನ ,ನವಗ್ರಹ ಮಂಡಲ ......ಇತ್ಯಾದಿ
ಇವುಗಳೊಂದಿಗೆ ಇನ್ನು ಹಲವಾರು ವಸ್ತುಗಳ ಬಳಕೆ ಮಾಡಬಹುದು ಮುಖ್ಯವಾಗಿ ಅಲಂಕಾರ ಮಾಡುವುದಕ್ಕೆ. ಮಾರುಕಟ್ಟೆಯಲ್ಲಿ ಅನೇಕ ವಿಧವಾದ ಅಲಂಕಾರಿಕ ಸಾಮಾನು ದೊರೆಯುತ್ತದೆ . ಇದು ಪ್ರತಿಯೊಬ್ಬರ ಆಸಕ್ತಿ ಮತ್ತು ಅಭಿರುಚಿ ಮೇಲೆ ಅವಲಂಭಿಸಿದೆ.
ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಈ ದಾರವನ್ನು ಕೈಗೆ ಕಟ್ಟಿಕೊಳ್ಳಬೇಕು.ವಿನಾಯಕನಿಗೆ ಪೂಜೆ ಮಾಡಿ ನಂತರ ವರಮಹಾಲಕ್ಷ್ಮಿ ದೇವಿಗೆ ಪೂಜೆ ಮಾಡಿ.ಪೂಜೆಯ ನಂತರ ಕಥಾ ಶ್ರವಣ ಮಾಡಬೇಕು. ಸುಮಂಗಲಿಯರಿಗೆ ಅರಿಶಿನ ಕುಂಕುಮ ಕೊಡಬೇಕು.ಪೂಜೆಯ ಮಾರನೆಯ ದಿನ ಶನಿವಾರ, ದೇವರ ವಿಸರ್ಜನೆ ಮಾಡಿ, ನಂತರ ಕಲಶ ಪಾತ್ರೆಯ ಅಕ್ಕಿಯನ್ನು ಅಡಿಗೆಯಲ್ಲಿ ಉಪಯೋಗಿಸಿ, ಕಲಶಕ್ಕೆ ಇಟ್ಟ ತೆಂಗಿನಕಾಯಿಯಿಂದ ಸಿಹಿ ತಿಂಡಿಯನ್ನು ಮಾಡಿ. ವ್ರತದ ದಿನ ಪೂಜೆ ಮಾಡಲು ಆಗದಿದ್ದರೆ, ಶ್ರಾವಣದಲ್ಲಿ ಇನ್ನೊಂದು ಶುಕ್ರವಾರ ಈ ವ್ರತ ಮಾಡಬಹುದು.
ವರಮಹಾಲಕ್ಷ್ಮಿಯು ನಮ್ಮೆಲ್ಲರನ್ನು ಅನುಗ್ರಹಿಸಿ ಕಾಪಾಡಲಿ
-ಸಂಗ್ರಹ(poojavidaana blog)
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments