ಸರ್ವಜ್ಞನ ವಚನಗಳು -
ನಂದಿಯನು ಏರಿದನ
ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ
ಮುಂದೆ ಹೇಳುವೆನು ಸರ್ವಜ್ಞ
ಮುನ್ನ ಕಾಲದಲಿ ಪನ್ನಗಧರನಾಳು
ಎನ್ನೆಯ ಪೆಸರು, ಪುಷ್ಪದತ್ತನು ಎಂದು
ಮನಿಪರು ದಯದಿ ಸರ್ವಜ್ಞ
ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ
ಮುದವ ಸಾರೆ, ಸರ್ವಜ್ಞನೆಂದೆನಿಸಿ
ನಿಂದವನು ನಾನೆ ಸರ್ವಜ್ಞ
ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ
ಬಣ್ಣೆಸಿಬರೆದ ಪಟದೊಳಗೆಯಿರುವಾತ
ತಣ್ಣೊಳಗೆ ಇರನೇ ಸರ್ವಜ್ಞ
ಶ್ರಿ ಬಸವಣ್ಣನವರ ವಚನಗಳು
ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು,
ಸಸಿಯೊಳಗಣ ರಸದ ರುಚಿಯಂತಿದ್ದಿತ್ತು,
ನನೆಯೊಳಗಣ ಪರಿಮಳದಂತಿದ್ದಿತ್ತು,
ನಿಮ್ಮ ನಿಲುವು ಕೂಡಲಸಂಗಮದೇವಾ,
ಕನ್ಯೆಯ ಸ್ನೇಹದಂತಿದ್ದಿತ್ತು.
ಕಾಳಿಯ ಕಣ್ ಕಾಣದಿಂದ ಮುನ್ನ,
ತ್ರಿಪುರ ಸಂಹಾರದಿಂದ ಮುನ್ನ,
ಹರಿವಿರಂಚಿಗಳಿಂದ ಮುನ್ನ,
ಉಮೆಯ ಕಳ್ಯಾಣದಿಂದ ಮುನ್ನ,
ಮುನ್ನ, ಮುನ್ನ, ಮುನ್ನ,
ಅಂದಿಂಗೆಳೆಯ ನೀನು,
ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ.
ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು
ಸುಖಿಯಾಗಿಯಾನು ಬದುಕಿದೆನಯ್ಯಾ. ಅದೇನು ಕಾರಣ
ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು
ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ ಕೂಡಲಸಂಗಮದೇವಾ.
೭ಭವಬಂಧನ ಭವಪಾಶವಾದ ಕಾರಣವೇನಯ್ಯಾ?
ಹಿಂದಣ ಜನ್ಮದಲಿ ಲಿಂಗವ ಮರೆದೆನಾಗಿ,
ಹಿಂದಣ ಸಿರಿಯಲ್ಲಿ ಜಂಗಮನ ಮರೆದೆನಾಗಿ
ಅರಿದೋಡೀ ಸಂಸಾರವ ಹೊದ್ದಲೀವನೆ ಕೂಡಲಸಂಗಮದೇವಾ.
೮ಸಂಸಾರ ಸಾಗರನ ತೆರೆಕೊಬ್ಬಿ ಮುಖದ ಮೇಲೆ ಅಲೆಯುತ್ತಿದ್ದುದೇ ನೋಡಾ!
ಸಂಸಾರಸಾಗರ ಉರದುದ್ದವೇ? ಹೇಳಾ! ಸಂಸಾರ ಸಾಗರ ಕೂರಲುದ್ದವೇ?
ಹೇಳಾ? ಸಂಸಾರ ಸಾಗರ ಸಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ?
ಅಯ್ಯಾ, ಅಯ್ಯಾ, ಎನ್ನ ಹುಯ್ಯಲ ಕೇಳಯ್ಯ? ಕೂಡಲಸಂಗಮದೇವಾ ನಾನೇನೆನುವೆನಯ್ಯಾ?
ಅಕ್ಕಮಹಾದೇವಿ
ಮರಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು.
ಆತ್ಮ ಆತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು.
ಇಂತಪ್ಪ ಅನುಭಾವರ ಅನುಭಾವವ ತೋರಿ ಎನ್ನ ಒಡಲನುಳುಹಿಕೊಳ್ಳಾ
ಚೆನ್ನಮಲ್ಲಿಕಾರ್ಜುನಾ. --- ಅಕ್ಕಮಹಾದೇವಿ
ಅಂಬಿಗರ ಚೌಡಯ್ಯ
ವೇದದಲುಳ್ಳಡೆ ಪ್ರಾಣಿವಧೆಯಪ್ಪುದೆ ?
ಶಾಸ್ತ್ರದಲುಳ್ಳಡೆ ಸಮಯವಾದವಪ್ಪುದೆ ?
ಪರ್ವತದಲುಳ್ಳಡೆ ಹೋದವರು ಬಹರೆ ?
ನಿರ್ಬುದ್ಧಿ ಮಾನವರನೇನೆಂಬೆ! ಮನ, ವಚನ,
ಕಾಯಶುದ್ಧಿಯಾಗಿಪ್ಪಾತನ ಹೃದಯದಲಿ ನಿಮ್ಮ ಕಂಡೆನೆಂದನಂಬಿಗ ಚೌಡಯ್ಯ.
ಅಂಬಿಗರ ಚೌಡಯ್ಯ
ಗಿಡುವಿನ ಪುಷ್ಪವ ಕೊಯ್ಯೆನು,
ಮಡುವಿನಗ್ಘವಣಿಯ ತುಳುಕೆನು, ಸ್ಥಾವರಂಗಳ ಪೂಜಿಸೆನು.
ಕೇಳು ಕೇಳು ನಮ್ಮಯ್ಯಾ; ಮನದಲ್ಲಿ ನೆನೆಯೆ, ವಚನಕ್ಕೆ ತಾರೆ,
ಹೊಡವಂಟು ಬೇರು ಮಾಡುವವನಲ್ಲ.
ಬಸುರೊಳಗಿರ್ದು ಕಾಲನಿಡುವ ಬುದ್ಧಿ ಕೂಡದೆಂದನಂಬಿಗ ಚೌಡಯ್ಯ.
ಅಂಬಿಗರ ಚೌಡಯ್ಯ
ಕಳವು ಪಾರದ್ವಾರಕ್ಕೆ ಪರಾಕುಂಟೆರಿ
ಅದು ತನ್ನ ಒಡಲಳಿವ ಇರವು. ವರ್ಮ, ಧರ್ಮ,
ವಚನಾನುಭವಂಗಳ ಮಾಡುವಲ್ಲಿ ಪರಚಿಂತೆ ಪರಾಕು ಪರಿಭ್ರಮಣ-
ಈ ಗುಣ ತನ್ನರಿವಿಂಗೆ ಕೇಡೆಂದನಂಬಿಗ ಚೌಡಯ್ಯ.
ಅಂಬಿಗರ ಚೌಡಯ್ಯ
ಮುಂದು ಜಾವದಲೆದ್ದು, ಲಿಂಗದಂಘ್ರಿಯ ಮುಟ್ಟಿ,
ಸುಪ್ರಭಾತ ಸಮಯದಲ್ಲಿ ಶಿವಭಕ್ತರ ಮುಖವ ನೋಡುವುದು.
ಹುಟ್ಟಿದುದಕ್ಕೆ ಇದೇ ಸಫಲ ನೋಡಾ, ಸತ್ಯವಚನವಿಂತೆಂದುದು_
ಇವಿಲ್ಲದವರ ನಾನೊಲ್ಲೆ ಕಾಣಾ ಗುಹೇಶ್ವರಾ.
ಅಲ್ಲಮಪ್ರಭುದೇವರು
ಪರವನರಿದ ಸತ್ಪುರುಷರ ಸಂಗದಿಂದ ಶಿವಯೋಗದ ವಚನಾಮೃತವನು,
ಸದ್ಭಕ್ತಿಯುಳ್ಳ ಮಹೇಶ್ವರನು ತನ್ನ ಶ್ರೋತ್ರಮುಖದಲ್ಲಿ ಕೇಳಿ,
ಮನೋಮುಖದಲ್ಲಿ ಹಾರೈಸಿ, ತೃಪ್ತಿಮುಖದಲ್ಲಿ ಸಂತೋಷವನೆಯ್ದಬಲ್ಲಡೆ
ಆ ಸುಖವು ಪರಿಣಾಮವನೊಡಗೂಡುವುದು ! ಹೀಂಗಲ್ಲದೆ,
ಸಂಸಾರವಿಷಯರಸವ ತಮ್ಮ ಹೃದಯಕೂಪದಲ್ಲಿ ತುಂಬಿಕೊಂಡಿಪ್ಪ
ಜೀವರು ಕಾಯದಲ್ಲಿ ವಚನಾಮೃತವ ತುಂಬಿದಡೆ, ಭಿನ್ನಘಟದಲ್ಲಿ ಉದಕವ ಹೊಯ್ದಂತೆ ಕಾಣಾ ಗುಹೇಶ್ವರಾ.
ಅಲ್ಲಮಪ್ರಭುದೇವರು
ವಚನದ ರಚನೆಯೆಂಬ ಮಾತಿನ ಬಣ್ಣದ ಪರಿಯಲ್ಲ ನೋಡಾ.
ಹೊಲಳಿ ಕಂಡವರೆಲ್ಲರು ಮೂರ್ತಿಗೊಳಗಾದರು.
ವೇದ ಶಾಸ್ತ್ರ ಮಾರ್ಗವೆಲ್ಲವೂ ಹೊಗಳಿ ಕಾಣವೆಂಬುದ,
ಗುಹೇಶ್ವರ ಸಾಕ್ಷಿಯಾಗಿ ಮೂರುಲೋಕ ಬಲ್ಲುದು ಕಾಣಾ ಸಿದ್ಧರಾಮಯ್ಯಾ.
ಅಲ್ಲಮಪ್ರಭುದೇವರು
ತನು ಒಂದು ದ್ವೀಪ, ಮನ ಒಂದು ದ್ವೀಪ,
ಆಪ್ಯಾಯನ ಒಂದು ದ್ವೀಪ, ವಚನ ಒಂದು ದ್ವೀಪ._
ಇಂತೀ ನಾಲ್ಕು ದ್ವೀಪದೆಡೆಯ ಬೆಸಗೊಂಬಡೆ ಗುಹೇಶ್ವರಾ_ನಿಮ್ಮ ಸ್ಥಾನಂಗಳು.
ಅಲ್ಲಮಪ್ರಭುದೇವರು
ಮಡಿವಾಳ ಮಾಚಿದೇವ
ತಾವು ಭಕ್ತರೆಂದು ಪುರಾತರ ವಚನವ ಕೇಳಿ,
ಆಹಾ ಇನ್ನು ಸರಿಯುಂಟೆಯೆಂದು ಕೈವಾರಿಸುವರು ನೋಡಾ.
ಆ ಪುರಾತರ ವಚನವನೊತ್ತಿ ಹೇಳಹೋದಡೆ, ನಮಗೆ ಅಳವಡುವುದೆ ಗೃಹಸ್ಥರಿಗೆ ಎಂಬರು.
ಕೇಳಿ ಕೇಳಿ ಸತ್ಯವ ನಂಬದ ಮೂಳರನೇನೆಂಬೆನಯ್ಯಾ, ಕಲಿದೇವಯ್ಯ?
ಮಡಿವಾಳ ಮಾಚಿದೇವ
ವಚನದ ರಚನೆಯ ನುಡಿವ ಬಯಲುರಂಜಕರೆಲ್ಲ ಭಕ್ತರಪ್ಪರೆ ಅಯ್ಯಾ ?
ವಚನ ತನ್ನಂತಿರದು, ತಾನು ವಚನದಂತಿರ.
ಅದೆಂತೆಂದಡೆ: ತನುಮನಧನವನೆಲ್ಲ ಹಿಂದಿಟ್ಟುಕೊಂಡು,
ಮಾತಿನ ಬಣಬೆಯ ಮುಂದಿಟ್ಟುಕೊಂಡು, ಒಡೆಯನ ಕಂಡು ನಾಯಿ ಬಾಲವ ಬಡಿದುಕೊಂಬಂತೆ,
ಆ ತೆರನಾಯಿತೆಂದ ಕಲಿದೇವರದೇವಯ್ಯ.
ಮಡಿವಾಳ ಮಾಚಿದೇವ
ಎಲ್ಲಾ ವ್ಯಾವರ್ಣಂಗಳು ಸ್ಥಾಪ್ಯದೊಳಗು. ಎಲ್ಲಾ ವಚನಂಗಳು ತಾಪದೊಳಗು.
ಎಲ್ಲಾ ಸ್ತೋತ್ರಂಗಳು ಕ್ರೋಧದೊಳಗು. ಎಲ್ಲಾ ಅರಿವು ಮಥನದೊಳಗು.
ಎಲ್ಲಾ ಮೂರ್ತಿಗಳು ಪ್ರಳಯದೊಳಗು. ಎಲ್ಲಾ ಗೀತಂಗಳು ಸಂವಾದದೊಳಗು.
ಲಿಂಗಾನುಭಾವಿ ಇವನೊಂದನೂ ಮನದಲ್ಲಿ ನೆನೆಯ, ಏನೆಂದು ಅರಿಯ. ಸ್ವತಂತ್ರ ನಿತ್ಯನಾಗಿ,
ಭಕ್ತಿದಾಸೋಹವ ನಿಮ್ಮ ಬಸವಣ್ಣನಳವಡಿಸಿಕೊಂಡನು. ನಿಮ್ಮ ಬಸವಣ್ಣನಿಂತಹ ಸ್ವತಂತ್ರನಯ್ಯಾ ಕಲಿದೇವರದೇವಾ.
ಮಡಿವಾಳ ಮಾಚಿದೇವ
ಗುರುಪ್ರಸಾದ, ಲಿಂಗಪ್ರಸಾದ, ಜಂಗಮಪ್ರಸಾದ ಈ ತ್ರಿವಿಧ ಪ್ರಸಾದವ ಕೊಂಡು,
ನಂಬದ ಸ್ವಯವಚನ ವಿರೋಧಿಗಳ ಮಾತು ಕೇಳಲಾಗದು. ಕೇಳುವರು ಮಹಾಪಾತಕರು.
ಲಿಂಗವ ಮಾರಿಕೊಂಡುಂಬುವರು ನರಕವ ತಿಂಬುವದ ಮಾಣ್ಬರೆ, ಕಲಿದೇವಯ್ಯಾ.
ಮಡಿವಾಳ ಮಾಚಿದೇವ
Purandara Daasa
ಕೃಷ್ಣ ಬಾರೊ ಕೃಷ್ಣ ಬಾರೋ
ಕೃಷ್ಣಯ್ಯ ನೀ ಬಾರಯ್ಯ ||ಪ||
ಸಣ್ಣ ಹೆಜ್ಜೆಯನಿಟ್ಟು ಗೆಜ್ಜೆನಾದಗಳಿಂದ ||ಅ||
ಮನ್ಮಥಜನಕನೆ ಬೇಗನೆ ಬಾರೊ
ಕಮಲಾಪತಿ ನೀ ಬಾರೊ
ಅಮಿತಪರಾಕ್ರಮ ಶಂಕರ ಬಾರೊ
ಕಮನೀಯ ಗಾತ್ರನೆ ಬಾರಯ್ಯ ದೊರೆಯೆ ||1||
ಸುರುಳು ಕೇಶಗಳ ಒಲಿವ ಅಂದ
ಭರದ ಕಸ್ತೂರಿ ತಿಲಕದ ಚಂದ
ಶಿರದಿ ಒಪ್ಪುವ ನವಿಲುಕಣ್ಗಳಿಂದ
ತರತರದ ಆಭರಣಗಳ ಧರಿಸಿ ನೀ ಬಾರೊ ||2||
ಹಾಲುಬೆಣ್ಣೆಗಳ ಕೈಯಲಿ ಕೊಡುವೆ
ಮೇಲಾಗಿ ಭಕ್ಷ್ಯಗಳ ಮುಚ್ಚಿಟ್ಟು ತರುವೆ
ಜಾಲ ಮಾಡದೆ ಬಾರಯ್ಯ ಮರಿಯೆ
ಬಾಲ ಎನ್ನ ತಂದೆ ಪುರಂದರವಿಠಲ
kanakadasa
ಪಲ್ಲವಿ
ಕೃಷ್ಣ ನೀ ಬೇಗನೇ ಬಾರೋ
ಅನುಪಲ್ಲವಿ
ಬೇಗನೆ ಬಾರೋ ಮುಖವನ್ನು ತೋರೋ
ಕಾಲಾಲಂದುಗೆ ಗೆಜ್ಜೆ ನೀಲದ ಭಾವುಲಿ
ನೀಲವರ್ಣನೆ ನಾಟ್ಯವಾಡುತ್ತ ಬಾರೋ ೧
ಉಡಿಯಲ್ಲಿ ಉಡುಗೆಜ್ಜೆ ಬೆರಳಲ್ಲಿ ಉಂಗುರ
ಕೊರಳಲ್ಲಿ ಹಾಕಿದ ವೈಜಯಂತಿಮಾಲ ೨
ಕಾಶಿ ಪೀತಾಂಬರ ಕೈಯಲ್ಲಿ ಕೊಳಲು
ಪೂಶಿದ ಶ್ರೀ ಗಂಧ ಮೈಯೊಳು ಗಮ್ಮ ೩
ತಾಯಿಗೆ ಬಾಯಲ್ಲಿ ಜಗವನ್ನು ತೋರಿದ
ಜಗದೋದ್ಧಾರಕ ನಮ್ಮ ಉಡುಪಿ ಶ್ರೀ ಕೃಷ್ಣ ೪
Jagannatha Daasa
ಪಲ್ಲವಿ
ದಯಮಾಡೆ ದಯಮಾಡೆ ತಾಯೆ ವಾಗ್ದೇವಿ ||
ಅನುಪಲ್ಲವಿ
ದಯದಿಂದ ನೀನೆನ್ನ ನೋಡೆ ವಾಗ್ದೇವಿ ||
ಚರಣ
ಹಿತದಿ ಸನ್ಮತಿಯ ಶ್ರೀಮತಿದೇವಿ ನೀಡೆ
ವ್ರತತಿಜನೇತ್ರೆ ಭಾರತಿ ನೀ ದಯಮಾಡೆ ||೧|
ಸುಮುಖೀ ತ್ವಚ್ಚರಣಾಬ್ಜ ದ್ರುಮಛಾಯಶ್ರಿತರ
ಸುಮತಿಗಳೊಳಗಿಟ್ಟು ಮಮತೆಯಿಂ ಸಲಹೆ||೨||
ಜಗನ್ನಾಥವಿಠಲನ ಅಂಘ್ರಿಗಳ ಸೇವೆಯೊಳು
ಸುಗುಣೆ ಸನ್ಮತಿಕೊಟ್ಟು ಬೇಗೆನ್ನ ಸಲಹೆ||೩||
kanakadasa
ಅರವಿಂದಾಲಯೇ ತಾಯೇ ಶರಣು ಹೊಕ್ಕೆನು ಕಾಯೇ
ಸಿರಿ ರಮಣನ ಪ್ರಿಯೇ ಜಗನ್ಮಾತೇ||
ಕಮಲ ಸುಗಂಧಿಯೇ ಕಮಲದಳ ನೇತ್ರೆಯೆ ಕಮಲವಿಮಲ ಶೋಭಿತೇ
ಕಮನೀಯ ಹಸ್ತಪಾದ ಕಮಲವಿರಾಜಿತೇ ಕಮಲೇ ಕಾಯೇ ಎನ್ನನು(ಶ್ರೀ ಲಕುಮಿಯೇ)
ನಿನ್ನ ಕರುಣ ಕಟಾಕ್ಷ ವಿಕ್ಷಣದಿಂದಲಿ ತನುಮನಗಳನಿತ್ತೆ ಧನ್ಯ ವಿರಾಜಿತೇ
ಅಜಭಾವಾದಿಗಳ ಪ್ರಸನ್ನೇ ಕಾಯೇ ಎನ್ನನು(ಶ್ರೀ ಲಕುಮಿಯೇ)
ಹರಿ ನಿನ್ನ ಉರದಲ್ಲಿ ಧರಿಸಿದನೆಂಬಂತ ಕರುವದಿ ಮರೆಯದಿರೆ
ನಿರತ ನಿನ್ನಯ ಮುದ್ದು ಪುರಂದರವಿಟ್ಟಲನ ಚರಣಕಮಲವ ತೋರಿಸೆ(ಶ್ರೀ ಲಕುಮಿಯೇ)
kanakadasa
ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ
ನೀ ದೇಹದೊಳಗೊ ನಿನ್ನೊಳು ದೇಹವೊ||
ಬಯಲು ಆಲಯದೊಳಗೊ ಆಲಯವು ಬಯಲೊಳಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ || 1 ||
ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಗಳೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ || 2 ||
ಕುಸುಮದೊಳು ಗಂಧವೊ ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು ಆಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ || 3 ||
ರಚನೆ : ಪುರಂದರ ದಾಸರು
ಪಲ್ಲವಿ
ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ
ಬ್ರಹ್ಮಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೊ
ಚರಣ
ನಷ್ಟ ಮೊದಲಾದಂಥ ಕಷ್ಟ ಬಿಡಿಸೊ
ನಿನ್ನ ಪಟ್ಟದ ರಾಣಿಗೆ ಹೇಳಿ ಪದವಿ ಕೊಡಿಸೊ
ಇಷ್ಟ ಭಕ್ತಜನರೊಳು ಎನ್ನ ಸೇರಿಸೊ
ಈ ಸೃಷ್ಟಿಯೊಳು ನಿನ್ನ ದಾಸಾನು ದಾಸನೆನಿಸೊ [೧]
ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೊ
ಪೊಂಬಟ್ಟಲೊಳಗಿನ ಹಾಲು ಉಚ್ಚಿಷ್ಟ ಹಾಕಿಸೊ
ಗಟ್ಯಾಗಿ ಸಕ್ಕರೆ ತುಪ್ಪ ರೊಟ್ಟಿ ಉಣ್ಣಿಸೊ
ಮುಂದೆ ಹುಟ್ಟಿ ಇಹ ಜನ್ಮಂಗಳ ಎನಗೆ ಬಿಡಿಸೊ [೨]
ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೊ
ಉತ್ಕೃಷ್ಟ ಬಂಗಾರದೊಳು ಎನ್ನ ಸೇರಿಸೊ
ಬೆಟ್ಟಿಗೆ ಉಂಗುರ ಮಾಡಿ ಎನ್ನ ಧರಿಸೊ ಸ್ವಾಮಿ
ದಿಟ್ಟ ಪುರಂದರ ವಿಠಲನೆ ದಯದಿ ಪಾಲಿಸೊ [೩]
ರಚನೆ : ಪುರಂದರ ದಾಸರು
ದಾಸನ ಮಾಡಿಕೊ ಎನ್ನ ಸ್ವಾಮಿ
ಸಾಸಿರ ನಾಮದ ವೆಂಕಟರಮಣ
ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ
ಕರುಣ-ಕವಚವೆನ್ನ ಹರಣಕೆ ತೊಡಿಸೊ
ಚರಣಸೇವೆ ಎನಗೆ ಕೊಡಿಸೊ ಅಭಯ
ಕರ ಪುಷ್ಪವ ಎನ್ನ ಶಿರದಲ್ಲಿ ಮುಡಿಸೊ ||೧||
ದೃಢಭಕ್ತಿ ನಿನ್ನಲ್ಲಿ ಬೇಡಿ ನಾ
ಅಡಿಗೆರಗುವೆನಯ್ಯ ಅನುದಿನ ಪಾಡಿ
ಕಡೆಗಣ್ಣಲೇಕೆನ್ನ ನೋಡಿ ಬಿಡುವೆ
ಕೊಡು ನಿನ್ನ ಧ್ಯಾನವ ಮನಶುಚಿ ಮಾಡಿ ||೨||
ಮೊರೆಹೊಕ್ಕವರ ಕಾಯುವ ಬಿರುದು ಎನ್ನ
ಮರೆಯದೆ ರಕ್ಷಣೆ ಮಾಡಯ್ಯ ಪೊರೆದು
ದುರಿತಗಳೆಲ್ಲವ ತರಿದು ಸಿರಿ
ಪುರಂದರ ವಿಠಲ ಎನ್ನನು ಪೊರೆದು ||೩||
ಪಾಲಿಸೆಮ್ಮ ಮುದ್ದು ಶಾರದೆ
ಪಾಲಿಸೆಮ್ಮ ಮುದ್ದು ಶಾರದೆ
ಎನ್ನ ನಾಲಿಗೆಯಲಿ ನಿಲ್ಲ ಬಾರದೆ || ಪಲ್ಲವಿ ||
ಲೋಲಲೋಚನೆ ತಾಯೆ
ನಿರುತ ನಂಬಿದೆ ನಿನ್ನ || ಅನುಪಲ್ಲವಿ ||
ಅಕ್ಷರಕ್ಷರ ವಿವೇಕವಾ ನಿನ್ನ ಕುಕ್ಷಿಯೊಳಿರೆ
ಏಳು ಲೋಕವ ಸಾಕ್ಷಾತ್ ರೂಪದಿಂದ
ಒಲಿದು ರಕ್ಷಿಸು ತಾಯೆ || ೧ ||
ಶೃಂಗಾರಪುರ ನೆಲೆವಾಸಿನೀ ದೇವಿ
ಸಂಗೀತಗಾನ ವಿಲಾಸಿನೀ
ಮಂಗಳಗಾತ್ರೆ ತಾಯೆ ಭಳಿರೆ ಬ್ರಹ್ಮನ ರಾಣಿ || ೨ ||
ಸರ್ವಾಲಂಕಾರ ದಯಾಮೂರುತಿ ನಿನ್ನ
ಚರಣವ ಸ್ಮರಿಸುವೆ ಕೀರುತಿ
ಗುರುಮೂರ್ತಿ ಪುರಂದರ ವಿಠಲನ್ನ ಸ್ಮರಿಸುವೆ || ೩ ||
ವಂದಿಸುವದಾದಿಯಲಿ ಗಣನಾಥನ ||
ವಂದಿಸುವದಾದಿಯಲಿ ಗಣನಾಥನ ||
ಸಂದೇಹ ಸಲ್ಲ ಶ್ರೀ ಹರಿಯಾಜ್ಞೆಯಿದಕುಂಟು ||
ಹಿಂದೆ ರಾವಣ ತಾನು ವಂದಿಸದೆ ಗಜಮುಖನ
ನಿಂದು ತಪವನು ಕೈದು ವರ ಪಡೆಯಲು
ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ
ತಂದ ವರಗಳನೆಲ್ಲ ಧರೆಗೆ ಇಳಿಸಿದನು ||
ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ
ಮುಂದೆ ಗಣಪನ ಪೂಜಿಸೆಂದು ಪೇಳೆ
ಒಂದೇ ಮನದಲಿ ಬಂದು ಪೂಜಿಸಲು ಗಣನಾಥ
ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು ||
ಇಂದು ಜಗವೆಲ್ಲ ಉಮೆನಂದನನ ಪೂಜಿಸಲು
ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು
ತಂದೆ ಸಿರಿಪುರಂದರವಿಠಲನ ಸೇವೆಯೊಳು
ಬಂದ ವಿಘ್ನವ ಕಳೆದಾನಂದವನು ಕೊಡುವ ||
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments