Skip to main content

Posts

Showing posts from December, 2015

* ಕಿಡ್ನಿಸ್ಟೋನ್ ನಿವಾರಣೆಗೆ ಮನೆಮದ್ದು ***

ಕಿಡ್ನಿಯಲ್ಲಿ ಕಲ್ಲು (ಕಿಡ್ನಿ ಸ್ಟೋನ್) ಬಂದರೆ ಅದನ್ನು ಶಸ್ತ್ರ ಚಿಕಿತ್ಸೆ ಮಾಡಬೇಕಾಗುತ್ತದೆ. ಆದರೆ calculusನಲ್ಲಿ 5 mm ನಷ್ಟು ಇದ್ದರೆ ಅದನ್ನು ಮನೆ ಮದ್ದಿನಿಂದ ಹೋಗಲಾಡಿಸಬಹುದಾಗಿದೆ. ಈ ಕೆಳಗಿನ ವಿಧಾನಗಳು ಕಿಡ್ನಿಯಲ್ಲಿರುವ ಕಲ್ಲು ತೆಗೆಯಲು ಮಾತ್ರವಲ್ಲ, ಕಿಡ್ನಿಯಲ್ಲಿ ಕಲ್ಲು ಉಂಟಾಗದಂತೆ ತಡೆಯಲು ಸಹಕಾರಿಯಾಗಿದೆ. 1. ನೀರು: ಸಾಕಷ್ಟು ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹದಲ್ಲಿ ನಿರಿನಂಶ ಕಡಿಮೆಯಾದರೆ ನಿಶ್ಯಕ್ತಿ, ಕಿಡ್ನಿಯಲ್ಲಿ ಕಲ್ಲು , ತ್ವಚೆ ಸೌಂದರ್ಯ ಹಾಳಾಗುವುದು ಮುಂತಾದ ಸಮಸ್ಯೆ ಉಂಟಾಗುತ್ತದೆ. ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡರೆ ದಿನಕ್ಕೆ 5-6 ಲೀಟರ್ ನೀರು ಕುಡಿದರೆ ಕಲ್ಲು ಮೂತ್ರದಲ್ಲಿ ಹೊರಹೋಗುವುದು. 2. ನೀರಿನಲ್ಲಿ ನೆನೆ ಹಾಕಿದ ಮೆಂತೆ: ಒಂದು ಚಮಚ ಮೆಂತೆಯನ್ನು ಒಂದು ಲೋಟ ನೀರಿನಲ್ಲಿ ನೆನೆ ಹಾಕಿ ಬೆಳ್ಳಗ್ಗೆ ತಿನ್ನಬೇಕು. ಈ ರೀತಿ ಮಾಡಿದರೆ ಕಿಡ್ನಿಯಲ್ಲಿರುವ ಕಲ್ಲು ಮಾತ್ರವಲ್ಲ ದೇಹದಲ್ಲಿರುವ ಕಷ್ಮಲಗಳನ್ನು ತೊಡೆದು ಹಾಕಲು ಸಹಕಾರಿಯಾಗಿದೆ. 3. ತಾಟಿನುಂಗು: ಇದನ್ನು ಪಾಮ್ ಫ್ರೂಟ್ ಅಂತ ಕೂಡ ಕರೆಯುತ್ತಾರೆ. ಇದರಿಂದ 'ತಾಲ್ ಮಿಶ್ರಿ' ಎಂಬ ಸಕ್ಕರೆ ತಯಾರಿಸಲಾಗುವುದು. ಇದನ್ನು ಒಂದು ರಾತ್ರಿ ನೀರಿನಲ್ಲಿ ಕಲೆಸಿ ಬೆಳಗ್ಗೆ ಎದ್ದು ಕುಡಿಯುವುದು ಒಳ್ಳೆಯದು. ಇದು ಸಿಗುವುದು ಸ್ವಲ್ಪ ಕಷ್ಟ. ಆದರೆ ಇದು ಕಿಡ್ನಿಯಲ್ಲಿರುವ ಕಲ್ಲು ನಿವಾರಣೆಗೆ ತುಂಬಾ ಸಹಕಾರಿಯಾಗಿದೆ. ಇಲ್ಲದಿದ...

ವೀಳ್ಯದೆಲೆ ಮತ್ತು ಮಹತ್ವಗಳು..

೧. ವೀಳ್ಯದೆಲೆ ತುದಿಯಲ್ಲಿ - ಲಕ್ಷ್ಮೀವಾಸ.. ೨. ವೀಳ್ಯದೆಲೆ ಬಲಭಾಗದಲ್ಲಿ ಬ್ರಹ್ಮ ದೇವರ ವಾಸ.. ೩. ವೀಳ್ಯದೆಲೆ ಮಧ್ಯದಲ್ಲಿ ಸರಸ್ವತೀ ದೇವಿ.. ೪. ವೀಳ್ಯದೆಲೆ ಎಡಭಾಗದಲ್ಲಿ ಪಾರ್ವತೀ ದೇವಿ.. ೫. ವೀಳ್ಯದೆಲೆ ಸಣ್ಣದಂಟಿನಲ್ಲಿ ಮಹಾವಿಷ್ಣುವಿನ ವಾಸ.. ೬. ವೀಳ್ಯದೆಲೆ ಹಿಂಭಾಗದಲ್ಲಿ ಚಂದ್ರದೇವತೆ ವಾಸ.. ೭. ವೀಳ್ಯದೆಲೆ ಎಲ್ಲಾ ಮೂಲೆಗಳಲ್ಲಿ ಪರಮೇಶ್ವರನ ವಾಸ. ೮. ವೀಳ್ಯದೆಲೆಯ ಬುಡದಲ್ಲಿ ಮೃತ್ಯುದೇವತೆಯ ವಾಸ.. (ಈ ಕಾರಣಕ್ಕೆ ತಾಂಬೂಲ ಹಾಕಿಕೊಳ್ಳುವಾಗ ತುದಿ ಭಾಗ ತೆಗೆದು ಹಾಕಿಕೊಳ್ಳುವುದು) ೯. ವೀಳ್ಯದೆಲೆ ತೊಟ್ಟಿನಲ್ಲಿ ಅಹಂಕಾರ ದೇವತೆ ಹಾಗೂ ದಾರಿದ್ರ್ಯಲಕ್ಷ್ಮೀ ಇರುತ್ತಾರೆ.. (ಆದುದರಿಂದನೇ ವೀಳ್ಯದೆಲೆ ಹಾಕಿಕೊಳ್ಳುವವರು ತೊಟ್ಟನ್ನು ಮುರಿದು ಹಾಕುತ್ತಾರೆ.., ಅಹಂಕಾರ ಹಾಗೂ ದಾರಿದ್ರ್ಯಲಕ್ಷ್ಮೀ ಬರಬಾರದೆಂಬ ಅರ್ಥ..) ೧೦. ವೀಳ್ಯದೆಲೆ ಮಧ್ಯಭಾಗದ ನಂತರ ಮನ್ಮಥನ ವಾಸ.., ಈ ಎಲ್ಲಾ ದೇವರುಗಳು ಇರೋದ್ರಿಂದಾನೆ, ವೀಳ್ಯದೆಲೆ ತಾಂಬೂಲಕ್ಕೆ ಇಷ್ಟು ಮಹತ್ವ.. ಪೂರ್ವ ಅಥವಾ ಉತ್ತರ ದಿಕ್ಕಿಗೆ ತುದಿ ಬರುವ ತರಹ ಇಟ್ಟು ದೇವರಿಗೆ ನೈವೇದ್ಯ ಮಾಡಬೇಕು.. ಯಾರ ಮನೆಯಲ್ಲೇ ತಾಂಬೂಲ ಕೊಟ್ಟರೂ, ದೇವರ ಮುಂದೆ ಇಟ್ಟು ನಮಸ್ಕಾರ ಮಾಡಿ, ಆ ನಂತರ ಉಪಯೋಗಿಸಬೇಕು.. ಮಂಗಳವಾರ, ಶುಕ್ರವಾರಗಳಂದು ಯಾವುದೇ ಕಾರಣಕ್ಕೂ ವೀಳ್ಯದೆಲೆ ಹೊರಗೆ ಹಾಕಬಾರದು.. ಹಸಿರಾಗಿರುವ ಮತ್ತು ಅಂದವಾಗಿ ಹಸ್ತದ ಆಕಾರ ಇರುವ ಎಳೆಯ ವೀಳ್ಯದೆಲೆ ನೈವೇದ್ಯ ಮಾಡಬೇಕು ಮತ್ತು ತಾಂಬೂಲ ಕೊ...