Skip to main content

ವ್ಯಕ್ತಿಗಾಗಿ ಮಾಡುವ ವೈದಿಕ ಪೂಜಾ ವಿಧಾನಕ್ಕೆ ಶಾಂತಿ ಎನ್ನುತ್ತಾರೆ.ಯಾವ ಕಾರಣಕ್ಕಾಗಿ ಯಾವ ಶಾಂತಿಯನ್ನು ಮಾಡಬೇಕು?

ಶಾಂತಿಗಳು ಪ್ರತ್ಯೇಕ ವ್ಯಕ್ತಿಗಾಗಿ ಮಾಡುವ ವೈದಿಕ ಪೂಜಾ ವಿಧಾನಕ್ಕೆ ಶಾಂತಿ ಎನ್ನುತ್ತಾರೆ.ಯಾವ ಕಾರಣಕ್ಕಾಗಿ ಯಾವ ಶಾಂತಿಯನ್ನು ಮಾಡಬೇಕು? ಮಗುವಿನ ಜನನ ಕಾಲದಲ್ಲಿ ನಾನಾವಿಧ ದೋಷಾದಿಗಳು ಬರುತ್ತವೆ. ಇದನ್ನು ಗುರುಗಳ ಮುಖೇನ ತಿಳಿದು ಬಂದಿರುವ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಕೊಳ್ಳಬೇಕು. ೧. ಕೃಷ್ಣಚತುರ್ದಶಿ ಜನನ ಶಾಂತಿ ಮಗು ಕೃಷ್ಣ ಪಕ್ಷದ ಚತುರ್ದಶಿಯ ದಿನ ಜನನವಾದಲ್ಲಿ ಅನೇಕವಾದ ಅನಿಷ್ಠ ಫಲಗಳು ಬರುತ್ತದೆ.ಚತುರ್ದಶಿ ತಿಥಿಯ ಕಾಲವನ್ನು ಆರು ಭಾಗ ಮಾಡಿ ಒಂದನೇಯ ಭಾಗವನ್ನು ಶುಭ ಎಂತಲೂ,ಏ ಎರಡನೇಯ ಭಾಗವನ್ನು ತಂದೆಗೆ ಅನಿಷ್ಠ ಎಂತಲೂ,ಮೂರನೇಯ ಭಾಗವನ್ನು ತಾಯಿಗೆ ಅನಿಷ್ಠ ಎಂತಲೂ, ನಾಲ್ಕನೇಯ ಭಾಗವನ್ನು ಮಾವನಿಗೆ ಅನಿಷ್ಠ ಶಎಂದೂ,ಐದನೇಯ ಭಾಗವನ್ನು ವಂಶನಾಶ ಎಂತಲೂ,ಆರನೇಯ ಭಾಗವನ್ನು ಧನಹಾನಿ ಎಂದೂ ಶಾಸ್ತ್ರದಲ್ಲಿ ಹೇಳಿದೆ. ೨. ಸಿನೀವಾಲೀ-ಕುಹೂ ಜನನ ಶಾಂತಿ ಮಗುವು ಅಮವಾಸ್ಯೆಯ ದಿನದಂದು ಜನಿಸಿದಲ್ಲಿ, ಅಮವಾಸ್ಯೆಯ ಪರಮಘಟಿಯನ್ನು ೮ ಭಾಗವನ್ನು ಮಾಡಿ ಪ್ರಥಮ ಭಾಗ ಜನನಕ್ಕೆ ಸಿನೀವಾಲೀ, ಅಷ್ಟಮ ಭಾಗಕ್ಕೆ ಕುಹೂ ಜನನ ಎಂದೂ ಕರೆಯುತ್ತಾರೆ. ಈ ಜನನದಲ್ಲಿ ಬರುವ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಸಿಕೊಳ್ಳಬೇಕು. ೩. ದರ್ಶ ಜನನ ಶಾಂತಿ: ಅಮವಾಸ್ಯೆ ತಿಥಿಯ ಪರಮಘಟಿಯನ್ನು ಭಾಗವನ್ನಾಗಿ ಮಾಡಿದಾಗ ೨ನೇಯ ಭಾಗದಿಂದ ೬ನೇ ಭಾಗದವರೆಗೆ ಹುಟ್ಟಿದ ಮಗುವಿಗೆ ಬರುವ ದೋಷ ನಿವಾರಣೆಗೆ ದರ್ಶ ಜನನ ಶಾಂತಿ ಅಥವಾ ಅಮವಾಸ್ಯೆ ಜನನ ಶಾಂತಿ ಮಾಡಿಸಿಕೊಳ್ಳಬೇಕು. ೪. ಸೂರ್ಯ ಸಂಕ್ರಾಂತಿ ಜನನ ಶಾಂತಿ ಮತ್ತು ವ್ಯತಿಪಾತ, ವೈದ್ರತಿ, ಅತೀಗಂಡ, ಗಂಡಯೋಗ ಜನನ ಶಾಂತಿ ಮಗುವು ಮೇಲೆ ಕಾಣಿಸಿದ ಕಾಲದಲ್ಲಿ ಜನಿಸಿದರೆ ಅದರ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಸಿಕೊಳ್ಳಬೇಕು. ೫. ಆಶ್ಲೇಷಾ ಜನನ ಶಾಂತಿ ಮಗುವು ಆಶ್ಲೇಷಾ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ದೋಷಾದಿಗಳ ನಿವಾರಣೆಗೆ ಶಾಂತಿಗಳನ್ನು ಮಾಡಿಸಿಕೊಳ್ಳಬೇಕು. ಮೊದಲನೇ ಪಾದ ಜನನಕ್ಕೆ ಶುಭ ಫಲ, ದ್ವಿತೀಯ ಪಾದ ಜನನಕ್ಕೆ ಧನನಾಶ, ತೃತೀಯ ಪಾದ ಜನನಕ್ಕೆ ತಾಯಿಗೆ ಅನಿಷ್ಠ. ೬. ಜ್ಯೇಷ್ಠ ನಕ್ಷತ್ರ ಜನನ ಶಾಂತಿ ಮಗುವು ಜ್ಯೇಷ್ಠ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ದೋಷಾದಿಗಳ ನಿವಾರಣೆಗೆ ಶಾಂತಿಗಳನ್ನು ಮಾಡಿಸಿಕೊಳ್ಳಬೇಕು. ವಿಶೇಷತಃ ೪ನೇ ಪಾದದಲ್ಲಿ ಜನಿಸಿದರೆ ತಂದೆ-ತಾಯಿಗೆ ಅನಿಷ್ಠ. ೭. ಮೂಲಾ ನಕ್ಷತ್ರ ಜನನ ಶಾಂತಿ ಮಗುವು ಮೂಲಾ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ೧ನೇ ಪಾದಕ್ಕೆ ಅತೀ ಅನಿಷ್ಠ. ೨ನೇ ಪಾದಕ್ಕೆ ತಾಯಿಗೆ ಅನಿಷ್ಠ. ೩ನೇ ಪಾದಕ್ಕೆ ಧನನಾಶ. ೪ನೇ ಪಾದಕ್ಕೆ ಕುಲನಾಶ. ಹೆಣ್ಣು ಮಗು ಈ ನಕ್ಷತ್ರದಲ್ಲಿ ಜನಿಸಿದರೆ ಗಂಡನ ತಂದೆಗೆ ಅತೀ ಅನಿಷ್ಠ. ೮. ಗ್ರಹಣ ಜನನ ಶಾಂತಿ ಮಗುವು ಸೂರ್ಯ ಅಥವಾ ಚದ್ರ ಗ್ರಹಣ ಕಾಲದಲ್ಲಿ ಜನಿಸಿದರೆ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಸಿಕೊಳ್ಳಬೇಕು. ೯. ಏಕ ನಕ್ಷತ್ರ ಜನನ ಶಾಂತಿ ತಾಯಿ, ತಂದೆ, ಅಣ್ಣ-ತಮ್ಮ ಎಲ್ಲರ ನಕ್ಷತ್ರ ಒಂದೇ ಆದಲ್ಲಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೧೦. ವಿಷ ಘಟಿ ಜನನ ಶಾಂತಿ ಮಗುವು ವಿಷ ನಾಡಿಯಲ್ಲಿ ಜನಿಸಿದರೆ ಸರ್ವರಿಷ್ಠ. ಆದ್ದರಿಂದ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೧೧. ತ್ರಿಕ ಪ್ರಸವ ಶಾಂತಿ ತಾಯಿಗೆ ಏಕ ಕಾಲದಲ್ಲಿ ಮೂರು ಮಗುವಿನ ಜನನವಾದರೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೧೨. ಭದ್ರಾ ಜನನ ಶಾಂತಿ: ಭದ್ರ ಯೋಗದಲ್ಲಿ ಜನಿಸಿದ ಮಗುವಿಗೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೧೩. ಅಧೋಮುಖ ಜನನ ಶಾಂತಿ ಮಗು ಜನಿಸಿವಾಗ ಕೆಳಮುಖವಾಗಿ ಜನಿಸಿದರೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೧೪. ಸದಂತ ಜನನ ಶಾಂತಿ ಮಗು ಹುಟ್ಟಿದಾಗಲೇ ಹಲ್ಲು ಇದ್ದರೆ ಬರುವ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೧೫. ಯಮಳ ಜನನ ಶಾಂತಿ ಏಕ ಕಾಲದಲ್ಲಿ ಎರಡು ಮಗುವಿನ ಜನನವಾದಲ್ಲಿ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು.. ೧೬. ಪ್ರಸವ ವೈಕ್ರತಿ ಜನನ ಶಾಂತಿ ಮಗು ಜನಿಸುವಾಗ ಅಂಗ ವಿಕಲವಿದ್ದಲ್ಲಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೧೭. ದಿನ ಕ್ಷಯ, ವ್ಯತಿಪಾತ ಯೋಗಾದಿ ಜನನ ಶಾಂತಿ ೧೮. ಬಾಲಾರಿಷ್ಠ ಜನನ ಶಾಂತಿ ಮಗು ಜನಿಸಿದಾಗ ಜನ್ಮದಲ್ಲಿ ರವಿ, ಕುಜ,ಶನಿ,ರಾಹು,ಕೇತುಗಳು ವಿಷಮ ಸ್ಥಿತವಾದಲ್ಲಿ ವಿಪರೀತ ಕಷ್ಟಗಳನ್ನು ಕೊಡುತ್ತದೆ. ಈ ಕಷ್ಟಗಳ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಕೊಳ್ಳಬೇಕು. ಈ ಶಾಂತಿಯನ್ನು ಮಗುವಿನ ಜನ್ಮದ ನಂತರದ ೧೨ನೆ ದಿನದ ಮೇಲೆ ಮಗು ಚಿಕ್ಕದಿದ್ದಾಗಲೆ ಮಾಡಿಕೊಳ್ಳುವುದು ಒಳ್ಳೆಯದು. ೧೯. ಅರಿಷ್ಟತ್ರಯ ಶಾಂತಿ ಮಗು ಜನಿಸಿದಾಗ ವಿಷಮ ಸ್ಥಾನ ಸ್ಥಿತರಾದ ಗ್ರಹದಿಂದ ಬರುವ ದೋಷ ನಿವಾರಣೆಗಾಗಿ ಈ ಶಾಂತಿ ಅಗತ್ಯ. ೨೦. ಪಂಚಮಾರಿಷ್ಟ ಶಾಂತಿ ಮಗು ಜನಿಸಿದಾಗ ಜನ್ಮ ಲಗ್ನ-ರಾಶಿಯಿಂದ ಪಂಚಮದಲ್ಲಿ ರವಿ ಇದ್ದರೆ ತಂದೆಗೆ ಅನಿಷ್ಠ, ಶನಿ ಇದ್ದರೆ ತಾಯಿಗೆ ಅನಿಷ್ಠ, ಕುಜ ಇದ್ದರೆ ಸಹೋದರೆನಿಗೆ, ಚಂದ್ರ ಇದ್ದರೆ ಮಾವನಿಗೆ, ಗುರುವಿದ್ದರೆ ತಾಯಿಯ ತಂದೆಗೆ, ಶುಕ್ರನಿದ್ದರೆ ಅಜ್ಜನಿಗೆ, ಶನಿ-ರಾಹುಗಳಿದ್ದರೆ ಮಗುವಿಗೆ ಹಾಗೂ ಕೇತುವಿದ್ದಲ್ಲಿ ಸಹೋದರನಿಗೆ ಅನಿಷ್ಠವಾದುದರಿಂದ ಈ ಶಾಂತಿಯ ಅವಶ್ಯಕತೆ ಇರುತ್ತದೆ. ೨೧. ಗೋಮುಖ ಪ್ರಸವ ಶಾಂತಿ ಮಗು ಜನಿಸಿದಾಗ ಬಂದಿರುವ ದಿನಕ್ಷಯ, ವ್ಯತೀಪಾತ-ವಾಘಾತ, ವಿಷ್ಠಿ-ಶೂಲ, ಗಂಡ-ಮೃತ್ಯು ಯೋಗ, ದಗ್ದಯೋಹ, ಆಶ್ಲೇಷ, ಜ್ಯೇಷ್ಠ, ಮೂಲಾ ನಕ್ಷತ್ರದಲ್ಲಿ ಜನಿಸಿದಾಗ ಎಲ್ಲಾ ದೋಷ ನಿವಾರಣೆಗೆ ಈ ಶಾಂತಿಯನ್ನು ಮತ್ತು ಗೋ ಗರ್ಭ ಜನನವನ್ನು ಮಾಡಿ ಆಮೇಲೆ ಉಕ್ತವಾದ ಶಾಂತಿಯನ್ನು ಮಾಡಬೇಕು. ೨೨. ಕುಜ-ರಾಹು ಸಂಧಿ ಶಾಂತಿ ನವಗ್ರಹದಲ್ಲಿ ಒಂದೊಂದು ಗ್ರಹಕ್ಕೆ ಇಷ್ಟು ವರ್ಷಗಳು ಮನುಷ್ಯನ ಜೀವನದಲ್ಲಿ ಅಧಿಪತ್ಯ (ಅಧಿಕಾರ) ಎಂದಿರುತ್ತದೆ. ಆದರೆ ಪರಸ್ಪರ ಶತ್ರು ಗ್ರಹಗಳ ಅಧಿಕಾರ ಅವಧಿ ಮುಗಿದು ಇನ್ನೊಂದು ಶತ್ರು ಗ್ರಹದ ಅಧಿಕಾರ ಆರಂಭ ಕಾಲದಲ್ಲಿ ೬ ತಿಂಗಳು ಮುಂಚಿತವಾಗಿ ಸಂಧಿ ಶಾಂತಿ ಮಾಡಿಸುತ್ತಾರೆ. ಇಲ್ಲಿ ಕುಜ ದಶಾ ೭ ವರ್ಷಗಳು ಮುಗಿದು ರಹು ದಶಾ೧೮ ವರ್ಷಗಲು ಆರಂಭವಾಗುವ ಸಮಯಕ್ಕೆ ಈ ಶಾಂತಿಯನ್ನು ಮಾಡಿಸಬೇಕು. ಈ ಸಂಧಿ ಕಾಲವಿ ವಿಶೇಷವಾಗಿ ಗಂಡಸರಿಗಿಗೆ ಹೆಚ್ಚು ಹಾನಿಕಾರಕವಾಗಿರುತ್ತದೆ. ಆಯುಷ್ಯದಲ್ಲಿ ಒಂದು ಕಂಟಕ ಎನ್ನಬಹುದು. ೨೩. ರಾಹು-ಬೃಹಸ್ಪತಿ ಸಂಧಿ ಶಾಂತಿ ರಾಹುವಿನ ಅಧಿಕಾರ ಅವಧಿ ೧೮ ವರ್ಷಗಳು ಕಳೆದು ಗುರುವಿನ ೧೬ ವರ್ಷದ ಅಧಿಕಾರದ ಅವಧಿ ಆರಂಭವಾಗುವ ೬ ತಿಂಗಳು ಮೊದಲು ಈ ಶಾಂತಿಯನ್ನು ಅಗತ್ಯವಾಗಿ ಮಾಡಿಸಿಕೊಳ್ಳಬೇಕು. ಈ ಸಂಧಿಕಾಲವು ವಿಶೇಷವಾಗಿ ಮಹಿಳೆಯರಿಗೆ ಹೆಚ್ಚು ಹಾನಿಕಾರಕವಾಗಿರುತ್ತದೆ. ೨೪. ಶುಕ್ರಾದಿತ್ಯ ಸಂಧಿ ಶಾಂತಿ ಶುಕ್ರಬ ಅಧಿಕಾರ ಅವಧಿ ೨೦ ವರ್ಷಗಳು ಕಳೆದು ಸೂರ್ಯನ ೬ ವರ್ಷದ ಅಧಿಕಾರದ ಅವಧಿ ಆರಂಭವಾಗುವ ೬ ತಿಂಗಳು ಮೊದಲು ಈ ಶಾಂತಿಯನ್ನು ಅಗತ್ಯವಾಗಿ ಮಾಡಿಸಿಕೊಳ್ಳಬೇಕು. ಈ ಸಂಧಿಕಾಲವು ಪುರುಷ ಮತ್ತು ಮಹಿಳೆಯರಿಬ್ಬರಿಗೂ ಹಾನಿಕಾರಕವಾಗಿರುತ್ತದೆ. ೨೫. ಷಷ್ಟ್ಯಬ್ಧ ಅಥವಾ ಉಗ್ರರಥ ಶಾಂತಿ ಮನುಷ್ಯನು ತನ್ನ ಜೀವನದ ಕಷ್ಟ-ಸುಖಗಳನ್ನು ಅನುಭವಿಸುತ್ತ ಸಕಾಲದಲ್ಲಿ ವಿವಾಹವಾಗಿ ಪತ್ನಿಯನ್ನೊಡಗೂಡಿ ಮಕ್ಕಳ ಆಗು ಹೋಗುಗಳನ್ನು ಪೂರೈಸುತ್ತ ತನ್ನ ಜೀವನದ ೬ನೇ ಸಂವತ್ಸರವನ್ನು ಪ್ರವೇಶಿಸಿದಾಗ ಜನ್ಮ, ನಕ್ಷತ್ರದಲ್ಲಿ ಈ ಶಾಂತಿಯನ್ನು ಮಾಡಬೇಕು. ಇದನ್ನು ಎಕೆ ಮಾಡಬೇಕು? ಇದನ್ನು ಮುಂದಿನ ಜೀವನದಲ್ಲಿ ಬರುವಂತಹ ಅಪಮೃತ್ಯು, ದುಃಸ್ವಪ್ನ ದರ್ಶನ, ಗೃಹಪೀಡೆ, ವಿವಿಧ ರೋಗಬಾದೆ, ಛಾಯಾವಿಕೃತಿ. ಭೂತ-ಪ್ರೇತಾದಿ ಪೀಡಾರೂಪಕವಾದಂತಹ ನಾನಾವಿಧ ಅರಿಷ್ಟ ನಿವಾರಣೆಗಾಗಿ ಮಾಡುವಂತಹ ಶಾಂತಿಯನ್ನು ಉಗ್ರರಥ ಶಾಂತಿ ಎನ್ನುತ್ತೇವೆ. ಈ ವಿಧಿಯಲ್ಲಿ ಗಣಪತಿ, ನವಗ್ರಹದೇವತೆಗಳನ್ನು, ಪೀಡಾಪರಿಹಾರಕನಾದ ಮೃತುಂಜಯನನ್ನು, ಅಶ್ವತ್ಥಾಮಾದಿ ಸಪ್ತ ಚಿರಂಜೀವಿಗಳನ್ನು, ಮೃತ್ಯುವನ್ನೇ ಜಯಿಸಿದ ಮಾರ್ಕೆಂಡೆಯನನ್ನು, ಆಯುರ್ದೇವತೆ ನಕ್ಷತ್ರದೇವತೆಗಳನ್ನು ಆರಾಧಿಸಬೇಕು. ಜಪ, ಹೋಮ, ತರ್ಪಣ, ಮಾರ್ಜನ, ಬ್ರಾಹ್ಮಣ ಭೋಜನವನ್ನಾಚರಿಸಿ ಗುರು-ಹಿರಿಯರ ಆಶೀರ್ವಾದವನ್ನು ಪಡೆಯಬೇಕು. ಈ ವಿಧಿಯಲ್ಲಿ ಉಗ್ರನೆಂಬ ಹೆಸರಿನ ಮೃತ್ಯುಂಜಯನು ಪ್ರಧಾನದೇವತೆಯಾದ್ದರಿಂದ ಉಗ್ರರಥ ಶಾಂತಿ ಎಂಬ ಹೆಸರು ಬಂತು. ಈ ವಿಧಿಯ ಅಂತ್ಯದಲ್ಲಿ ಕಲಶ ತೀರ್ಥಸ್ನಾನ ಮತ್ತು ಮಂಗಳದೃವ್ಯ ದರ್ಶನ ಅಲ್ಲದೇ ಪುನಃ ಮಂಗಳ ಸೂತ್ರ ಕಟ್ಟುವುದು ಮುಖ್ಯವಾಗಿರುತ್ತದೆ. ೨೬. ಭೀಮರಥ ಶಾಂತಿ ಈ ಶಾಂತಿಯನ್ನು ಜನ್ಮಕಾಲ ಮೊದಲುಗೊಂಡು ೭೦ನೇ ವರ್ಷವನ್ನು ಪ್ರವೇಶಿಸಿದಾಗ ಜನ್ಮಮಾಸ, ಜನ್ಮ ನಕ್ಷತ್ರದಲ್ಲಿ ಸಕಲಪೀಡಾಪರಿಹಾರಕ್ಕಾಗಿ ಮಾಡಬೇಕು. ಈ ವಿಧಿಯನ್ನು ವರ್ತಮಾನದಲ್ಲಿ ದೇಹದಲ್ಲಿ ಅಡಕವಾಗಿರುವ ವಾತ, ಪಿತ್ತ, ಕಫಾದಿ ನಾನಾವಿಧಧ ರೋಗಪೀಡಾ ಪರಿಹಾರಕ್ಕಾಗಿ ಅಲ್ಲದೆ ಮುಂದೆ ಬರುವಂತಹ ನಾನಾವಿಧ ಘೋರ ವಿಪತ್ಯಾದಿ ಸರ್ವಾರಿಷ್ಟ ನಿವಾರಣೆಗಾಗಿ ಆಯುಷ್ಯ, ಆರೋಗ್ಯ, ಆನಂದ ಪ್ರಾಪ್ತಿಗಾಗಿ ಈ ಶಾಂತಿಯನ್ನು ವಿಧಿಯುಕ್ತವಾಗಿ ಆಚರಿಸಿಕೊಳ್ಳಬೇಕು. ಈ ಶಾಂತಿ ಕ್ರಮದಲ್ಲಿ ಭೀಮ ಎಂಬ ಮಹಾ ಮೃತ್ಯುಂಜಯನು ಪ್ರಧಾನ ದೇವತೆಯಾದ್ದರಿಂದ ಇದನ್ನು ಭೀಮರಥ ಶಾಂತಿ ಎನ್ನಲಾಗಿದೆ. ಈ ವಿಧಿಯಲ್ಲಿ ಭೀಮ ಮೃತ್ಯುಂಜಯ, ಬ್ರಹ್ಮ, ವಿಷ್ಣು, ಲೋಕಪಾಲ ದೇವತೆಗಳನ್ನು, ಸಪ್ತಮಿ ಚಿರಂಜೀವಿಗಳನ್ನು, ಗ್ರಹದೇವತೆಯನ್ನು, ಆಯುಷ್ಯ ನಕ್ಷತ್ರ ಆಯುರ್ದೇವತೆಯನ್ನು ವಿಶೇಷವಾಗಿ ಆರಾಧಿಸಿ ಜಪ, ಹೋಮ, ತರ್ಪಣ, ಮಾರ್ಜನ, ಬ್ರಾಹ್ಮಣ ಭೋಜನ ದಾನಾದಿಗಳನ್ನು ಮಾಡಿ ಗುರು-ಹಿರಿಯರ ಆಶೀರ್ವಾದವನ್ನು ಪಡೆಯಬೇಕು. ೨೭. ಸಹಸ್ರಚಂದ್ರ ದರ್ಶನ ಅಥವಾ ಶತಾಭಿಷೇಕ ಜನ್ಮ ಕಾಲ ಮೊದಲುಗೊಂಡು ಅಧಿಕಮಾಸಾದಿಗಳನ್ನು ಗಣನೆಗೆ ತೆಗೆದುಕೊಂಡು ೮೦ ವರ್ಷ ೮ ತಿಂಗಳು ಆದಾಗ ಮಾಡುವ ವಿಧಿಗೆ ಸಹಸ್ರಚಂದ್ರ ದರ್ಶನ ಎನ್ನುವರು. ಈ ವಿಧಿಯಲ್ಲಿ ಆದಿತ್ಯಾದಿ ನವಗ್ರಹ ದೇವತೆಗಳನ್ನು, ಆಯುರ್ದ್ಧಾ ಅಗ್ನಿಯನ್ನು, ಬ್ರಹ್ಮ, ಪ್ರಜಾಪತಿ, ಪರಮೇಷ್ಟಿ, ಚತುರ್ಮುಖ, ಹಿರಣ್ಯ ಗರ್ಭ, ಅಗ್ನಿ, ಸೋಮ ಯಜ್ಞ ಆದಿ ದೇವತೆಗಳನ್ನು ಆರಾಧಿಸಿ ಜಪ, ಹೋಮ,ತರ್ಪಣ, ಮಾರ್ಜನ, ಬ್ರಾಹ್ಮಣ ಭೋಜನ ದಾನಾದಿಗಳನ್ನಾಚರಿಸಿ ಗುರು-ಹಿರಿಯರ ಆಶೀರ್ವಾದವನ್ನು ಪಡೆಯಬೇಕು. ಈ ಶಾಂತಿಯನ್ನು ವರ್ತಮಾನದಲ್ಲಿ ದೇಹ ಸ್ಥಿತ ಸಕಲ ಬಾಧೆ ನಿವಾರಣೆಗೊಳಿಸುವ ಪೂರ್ವಕ ಭವಿಷ್ಯತ್ತಿನಲ್ಲಿ ಬರುವ ರೋಗ ಪೀಡಾ, ಗ್ರಹ ಪೀಡೆ. ದೃಷ್ಟಿಮಾಂದ್ಯ, ಛಾಯಾವಿಕೃತಿ, ಭೂತ ಪ್ರೇತ ಪಿಶಾಚಾದಿ ಸಕಲ ಪೀಡೆ ನಿವಾರಣೆಗೋಸ್ಕರ ಅಕಾಲಬಾಧಾ ಪರಿಹಾರವಾಗಿ ಆಯುಷ್ಯ, ಆನಂದ, ಆರೋಗ್ಯ, ಸನ್ಮಂಗಲ, ಜ್ಞಾನ ವೈರಾಗ್ಯ ಪ್ರಾಪ್ತಿಗಾಗಿ ಈ ವಿಧಿಯನ್ನು ಆಚರಿಸುತ್ತಾರೆ. ೨೮. ಗ್ರಹ ಶಾಂತಿ ಮನೆಯಲ್ಲಿ ಸಾಲದ ಬಾಧೆ, ಅಶಾಂತಿ, ಕೆಟ್ಟ ಕನಸು ಮತ್ತು ರೋಗ-ರುಜಿನಗಳಿಂದ ತೊಂದರೆ ಅನುಭವಿಸುತ್ತಿದ್ದಲ್ಲಿ ಗ್ರಹ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೨೯. ವಾಸ್ತು ಶಾಂತಿ ಹೊಸದಾಗಿ ತೆಗೆದುಕೊಂಡ ಮನೆ ಅಥವಾ ಪ್ಲಾಟ್ ನಿರ್ಮಿಸುವಾಗ ಸ್ಥಳದಲ್ಲಿರುವಂತಹ ನೂನ್ಯತೆಯನ್ನು ಹೊಗಲಾಡಿಸಿ ಸುಖ ಶಾಂತಿ, ಸಮೃದ್ಧಿಯಿಂದ ನೆಲೆಸುವುದಕ್ಕಾಗಿ ವಾಸ್ತು ಶಾಂತಿಯನ್ನು ಮಾಡುವುದು ಅಗತ್ಯ. ೩೦. ರಾಕ್ಷೋಘ್ನ ಶಾಂತಿ ಹೊಸಮನೆಯನ್ನು ನಿರ್ಮಿಸುವಾಗ ಸ್ಥಳದಲ್ಲಿ ಉಪಯೋಗಿಸಿರುವ ಮರದ ಸಲಕರಣೆಗಳಲ್ಲಿ ಇರುವ ಭೂತ, ಪ್ರೇತ ಪಿಶಾಚಿ ಬಾಧೆ ನಿವಾರಣೆಗಾಗಿ ವಾಸ್ತು ಹೋಮದ ಪೂರ್ವದಲ್ಲಿ ಈ ಹೋಮವನ್ನು ರಾತ್ರಿಯಲ್ಲಿ ಮಾಡಬೇಕು. ೩೧. ಗೇಹಾಭಿವೃದ್ಧಿ ಶಾಂತಿ ದೇವಸ್ಥಾನದಲ್ಲಿ ಸ್ಥಾಪಿಸಿರುವ ವಿಗ್ರಹಕ್ಕೆ ದೇವರ ಸಾನಿಧ್ಯ ಪ್ರಾಪ್ತಿಗಾಗಿ, ದೇವಾಲಯದ ಅಭಿವೃದ್ಧಿಗಾಗಿ ಈ ಶಾಂತಿಯನ್ನು ಮಾಡಬೇಕು. ೩೨. ಸರ್ವಾದ್ಭುತ ಶಾಂತಿ ಮನೆಯಲ್ಲಿ ಅಮಂಗಲವಾದ ಘಟನೆಗಳು ನಡೆದಾಗ ಉದಾಹರಣೆಗೆ ಮನೆಗೆ ಬೆಂಕಿ ತಗಲುವುದು, ಮನೆಗೆ ಕಾಗೆ ಪ್ರವೇಶಿಸುವುದು, ಮನೆಯಲ್ಲಿ ಜೇನುಗೂಡು ಕಟ್ಟುವುದು ಮನೆಯ ಒಂದು ಭಾಗ ಕುಸಿಯುವುದು ಇಂತಹ ಅನಿಷ್ಠಗಳಿದ್ದಲ್ಲಿ ಈ ಶಾಂತಿಯನ್ನು ಮಾಡಿಕೊಳ್ಳಬೇಕು. ೩೩. ಗ್ರಾಮೊತ್ಪಾತ ಶಾಂತಿ ಗ್ರಾಮದಲ್ಲಿ ಉತ್ಪನ್ನವಾಗಿರುವ ನಾನಾವಿಧ ಭಾದೆ ನಿವಾರಣೆಗೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೩೪. ರಕ್ತ ವಲ್ಮೀಕ ಶಾಂತಿ ದೇವಾಲಯದಲ್ಲಿ, ಮನೆಯಲ್ಲಿ ಅಥವಾ ಸಭಾಸ್ಥಾನದಲ್ಲಿ ಉತ್ಪತ್ತಿಯಾಗಿರುವ ಹುತ್ತವು ಅಶುಭ ಸೂಚಕವಾಗಿರುವುದರಿಂದ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೩೫. ವಾನರ ಪ್ರವೇಶ ಶಾಂತಿ ಮನೆಯೊಳಗೆ ವಾನರ ಪ್ರವೇಶವಾದಲ್ಲಿ ಬರುವ ಅಪಮೃತ್ಯು, ಮಹಾರೋಗಾದಿ ಸರ್ವ ಅಮಂಗಲ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಬೇಕು. ೩೬. ಮರ್ಕಟ ಪ್ರವೇಶ ಶಾಂತಿ ಮನೆಯೊಳಗೆ ಕೃಷ್ಣಮುಖ ವಾನರ ಪ್ರವೇಶವಾದಲ್ಲಿ ಬರುವ ಅಪಮೃತ್ಯು, ಮಹಾರೋಗಾದಿ ಸರ್ವ ಅಮಂಗಲ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಬೇಕು. ೩೭. ಮಹಿಷಿ ಪ್ರವೇಶ ಶಾಂತಿ ಮನೆಯೊಳಗೆ ಎಮ್ಮೆ ಅಥವಾ ಕೋಣ ಪ್ರವೇಶಿಸಿದರೆ ಸೂಚಿತ ಅಪಮೃತ್ಯು ಹಾಗೂ ಸರ್ವ ಅಮಂಗಲ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಬೇಕು. ೩೮. ದೀಪಪತನ ಶಾಂತಿ ಮನೆಯಲ್ಲಿ ಪೂಜೆ ಮಾಡುತ್ತಿರುವಾಗ ಉರಿಯುತ್ತಿರುವ ದೀಪ ಆರಿಹೋದಲ್ಲಿ ಅಮಂಗಲ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಬೇಕು. ೩೯. ಭೀತಿಹರ ದಕ್ಷಾಕರ ದುರ್ಗಾ ಶಾಂತಿ ಗ್ರಹ ಪೀಡೆಗಳಿಂದ ಪುನಃ ಪುನಃ ಆಗುತ್ತಿರುವ ತೊಂದರೆಗಳ ನಿವಾರಣೆಗೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೪೦. ಅನಾವೃಷ್ಟಾದಿ ಶಾಂತಿ ಇದನ್ನು ಸಾಮೂಹಿಕವಾಗಿ ಉತ್ಪತ್ತಿಯಾಗಿರುವ ಮಹಾಮಾರಿ, ಪಶುರೋಗಾದಿ ನಿವಾರಣೆಗೆ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೪೧. ಕೃತ್ಯಾದ್ರೋಹ ಶಾಂತಿ ವಿರೋಧಿಗಳ ಯಾವುದೆ ಕುಟುಂಬ, ಉದ್ಯಮ, ಕೊಷ್ಠಗಳ ಮೇಲೆ ಮಾಡಿದ ಕೃತ್ರಿಮ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಬೇಕು. ೪೨. ದುಃಸ್ವಪ್ನ ಶಾಂತಿ ಕೆಲವೊಂದು ಸ್ವಪ್ನಗಳು ಅಮಂಗಲತೆಯ ಮುನ್ಸೂಚನೆ ಆಗಿರುವುದರಿಂದ ಈ ದೋಷ ನಿವಾರಣೆಗಾಗಿ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೪೩. ಪರ್ಜನ್ಯ ಶಾಂತಿ ದೇಶದ ಅಥವಾ ಯಾವುದೇ ಪ್ರಾಂತದಲ್ಲಿ ಸಕಾಲದಲ್ಲಿ ಮಳೆ ಆಗದಿದ್ದಲ್ಲಿ ಜೀವಿಗಳಿಗೆ ಅತಿ ಆತಂಕವಾಗುವುದು. ಆ ಪರಿಸ್ಥಿತಿ ನಿವಾರಣೆಗೆ ಪ್ರಕೃತಿ ದೇವಿಯನ್ನು ಶಾಂತಿಗೊಳಿಸಿ ಮಳೆ ಪಡೆಯುವುದಕ್ಕೆ ಈ ಶಾಂತಿ ಹೆಸರಿದೆ. ೪೪. ವೃಷ್ಟಿ ವೈಕೃತ ವೃಕ್ಷೋತ್ಪಾತ ವನಸ್ಪತಿ ಶಾಂತಿ ಭೂಮಿಯ ಮೇಲೆ ಮಳೆ ಇಲ್ಲದಿದರೂ ಕಷ್ಟ, ಅತಿಯಾದರೂ ಕಷ್ಟ. ವಿಶೇಷವಾಗಿ ಈ ಶಾಂತಿಯನ್ನು ಮಳೆ, ಗಾಳಿ, ಸಿಡಿಲಿನಿಂದ ಅರಣ್ಯ ಮತ್ತು ಫಲಗಳು ನಾಶವಾಗುತ್ತಿದ್ದಲ್ಲಿ ಪ್ರಕೃತಿದೇವಿಯನ್ನು ಶಾಂತಗೊಳಿಸಲು ಈ ಶಾಂತಿಯನ್ನು ಮಾಡಬೇಕು. ೪೫. ನಾಳವೇಷ್ಟನ ಶಾಂತಿ ಮಗುವಿನ ಜನನ ಸಮಯದಲ್ಲಿ ತಾಯಿಯಿಂದ ಮಗುವಿಗೆ ಆಹಾರಾದಿಗಳನ್ನು ಕೊಡುವ ನಾಳವು ಕಂಠ, ಕೈ, ಕಾಲುಗಳಿಗೆ ಸುತ್ತಿಕೊಂಡು ಜನಿಸಿದರೆ ತಂದೆ, ತಾಯಿಗೆ ಅನಿಷ್ಟ, ಸಂಪತ್ತು ನಾಶ, ಸರ್ವ ನಾಶ ಎಂದಿರುತ್ತದೆ. ಆದ್ದರಿಂದ ದೋಷ ನಿವಾರಣೆಗೆ ಈ ಶಾಂತಿಯನ್ನು ಮಾಡಬೇಕು. ೪೬. ವಿಶಾಖಾ ನಕ್ಷತ್ರ ಜನನ ಶಾಂತಿ ವಿಶೇಷವಾಗಿ ಮಗುವು ವಿಶಾಖಾ ನಕ್ಷತ್ರದ ೪ನೇ ಚರಣದಲ್ಲಿ ಜನಿಸಿದರೆ ತಂದೆ, ತಾಯಿ, ಬಂಧುಗಳಿಗೆ ವಿವಾಹದ ನಂತರ ವರನ ಸಹೋದರರಿಗೂ ಅನಿಷ್ಟವಾದ್ದರಿಂದ ಶಾಂತಿಯ ಅಗತ್ಯವಿದೆ. ೧,೨,೩ ಚರಣಗಳಿಗೆ ಅಗತ್ಯವಿಲ್ಲ. ೪೭. ಯೋನಿ ವೈಕೃತಿ ಶಾಂತಿ ಒಂದು ಹೆಣ್ಣು ಮಗಳು ಮೊದಲನೇ ಬಾರಿಗೆ ರಜೋದರ್ಶನವಾಗಿ(ಮಂತ್ಲಿ ಪಿರಿಯಡ್ಸ್) ನಂತರ ೬ ತಿಂಗಳವರೆಗೆ ರಜೋದರ್ಶನವಾಗದಿದ್ದಲ್ಲಿ ಮುಂದೆ ಮದುವೆಯಾದ ಮೇಲೆ ಬರುವಂತಹ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೪೮. ಗ್ರಹಣ ಶಾಂತಿ ಒಂದು ವೇಳೆ ಸೂರ್ಯಾ ಅಥವಾ ಚಂದ್ರ ಗ್ರಹಣವು ನಮ್ಮ ಜನ್ಮ ರಾಶಿಯಿಂದ ೪,೮,೧೨ನೇ ರಾಶಿಯಲ್ಲಿ ಸಂಭವಿಸುತ್ತಿದ್ದರೆ ಅದು ಅನಿಷ್ಟಕರವಾದ್ದರಿಂದ ಈ ಶಾಂತಿಯನ್ನು ಮಾಡುವುದು ಉತ್ತಮ. ೪೯. ಪ್ರಪೌತ್ರ ದರ್ಶನ ಶಾಂತಿ ಒಂದು ವೇಳೆ ನಮ್ಮ ಮಗನಿಗೆ ಮಗನು ಜನಿಸಿ,ಅವನಿಗೆ ಮಗನು ಜನಿಸಿದಾಗ ನಾವು ಪ್ರಪೌತ್ರವನ್ನು ಪಡೆದಂತೆ.ಈ ಪ್ರಪೌತ್ರ ದರ್ಶನವು ಮುತ್ತಜ್ಜನಿಗೆ ಒಳ್ಳೆಯದಲ್ಲ. ಆದ್ದರಿಂದ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೫೦. ಸರ್ವವ್ಯಾಧಿಹರ ನಾಮತ್ರಯೀ ಶಾಂತಿ ಜನ್ಮಾಂತರಗಳಿಂದ ಸಂಚಿತ ಪ್ರಾರಾಬ್ಧರೂಪ ಪಾಪ,ನಿವೃತ್ತಿ ಮತ್ತು ವ್ಯಾಧಿ ಬಾಧೆ ನಿವಾರಣೆಗಾಗಿ ಮತ್ತು ಆಯು: ಆರೋಗ್ಯ ಪ್ರಾಪ್ತಿಗಾಗಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೫೧. ಬಾಲಮಾರ್ಕಾಂಡೇಯ ಶಾಂತಿ ಮಗುವಿಗೆ ಮಹತ್ ಬಾಲಾರಿಷ್ಟ ವಶದಿಂದ ಆಯುಷ್ಯಕ್ಕೆ ಕಂಟಕ ಸೂಚಿಸಿದಲ್ಲಿ ಅನಿಷ್ಟ ಪರಿಹಾರಕ್ಕಾಗಿ ಈ ಶಾಂತಿಯನ್ನು ಮಾಡಿಸಬೇಕು. ೫೨. ರೋಹಿಣಿ ನಕ್ಷತ್ರ ಜನನ ಶಾಂತಿ ಮಗುವು ರೋಹಿಣಿ ನಕ್ಷತ್ರದಲ್ಲಿ ಜನಿಸಿದರೆ ಮಾವನಿಗೆ ಅರಿಷ್ಟ ಸೂಚನೆಯಾಗುವುದರಿಂದ ಈ ಶಾಂತಿಯನ್ನು ಮಾಡಿಸಬೇಕು. ೫೩. ಬಾಲಗ್ರಹ ಶಾಂತಿ ಮಗುವು ಪೂರ್ವ ಜನ್ಮಂತರದಲ್ಲಿ ಮಾಡಿದ ದೇವರ,ವೇದಗಳ,ಶಾಸ್ತ್ರಗಳ ಮತ್ತು ಗುರು ಹಿರಿಯರ ನಿಂದನಾದಿ ಸರ್ವ ಪಾತಕಗಳಿಂದ ಬರುವ ಪೀಡಾ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿಕೊಳ್ಳಬೇಕು. ೫೪. ಕುಂಭ ವಿವಾಹ ಶಾಂತಿ ಒಂದು ವೇಳೆ ಯುವತಿಯ ಕುಂಡಲಿಯಲ್ಲಿ ವೈಧವ್ಯ ಯೋಗವಿದ್ದಾಗ ಅಥವಾ ಎರಡು ಇಲ್ಲವೇ ಮೂರು ವಿವಾಹ ಯೋಗವಿದ್ದಲ್ಲಿ ದೋಷ ನಿವಾರಣೆಗೆ ಈ ಶಾಂತಿಯನ್ನು ಮಾಡಿಸುವುದು ಉತ್ತಮ. ೫೫. ಕದಳಿ ವಿವಾಹ ಶಾಂತಿ ಈ ವಿಧಿಯನ್ನು ಸಹ ಮೇಲೆ ಕಾಣಿಸಿದ ದೋಷ ನಿವಾರಣೆಗೆ ಮಾಡಿಸಲಾಗುತ್ತದೆ. ೫೬. ಅರ್ಕ ವಿವಾಹ ಶಾಂತಿ ಒಂದು ವೇಳೆ ಯುವಕನ ಜಾತಕದಲ್ಲಿ ಮೊದಲನೇಯ ವಿವಾಹವಾಗಿ ಆತನ ಪತ್ನಿಯು ಪತಿಯನ್ನು ತ್ಯಜಿಸಿದಾಗ ಇಲ್ಲವೇ ಮರಣ ಹೊಂದಿದಾಗ ಅದೇ ರೀತಿ ಎರಡನೇಯ ವಿವಾಹವು ಇದೇ ರೀತಿಯಾದಲ್ಲಿ ಮೂರನೇಯ ವಿವಾಹವಾಗುವ ಮುನ್ನ ಈ ಶಾಂತಿಯನ್ನು ಮಾಡಿಸಿಕೊಂಡು ವಿವಾಹವಾಗಬೇಕು. ಹೀಗೆ ಅನೇಕ ವಿಧವಾದ ಶಾಂತಿ,ಹೋಮ,ಯಜ್ಞಾದಿಗಳು ಇರುತ್ತಿದ್ದು ಅವುಗಳನ್ನು ಜ್ಯೋತಿಷ್ಯಿಗಳ ಅಥವಾ ಪುರೋಹಿತರ ಸಲಹೆಯಂತೆ ಅಗತ್ಯ ಇದ್ದಲ್ಲಿ ಮಾಡಿಸಿಕೊಳ್ಳಬೇಕು. ಯಾಕೆಂದರೆ ಒಂದೇ ಮನೋಕಾಮನೆಗಾಗಿ ಅನೇಕ ವಿಧಿಗಳು ಇರುತ್ತವೆ. ಸಮಸ್ಯೆಯನ್ನು ತಿಳಿದು ಬೇಕಾದುದನ್ನು ಮಾಡಿದರೆ ಪರಿಹಾರ ಖಚಿತ. ಸರಿಯಾದ ತಿಳುವಳಿಕೆ ಮತ್ತು ಧರ್ಮಸಂಪನ್ನರಾದ ವೈದಿಕರಿಂದ ಶಾಂತ್ಯಾದಿಗಳನ್ನು ಮಾಡಿಸಬೇಕು. ಫಲ ನಿಶ್ಚಿತವಾಗಿ ಸಿಗುತ್ತದೆ.

Comments

Unknown said…
Thanks for valuable guidance sir. Nowadays most of priests are unaware of these dhosas.if u know any body who can perform shanthi Pooja well, please inform.

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ...