Skip to main content

Posts

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ...

ಸಂಸ್ಕಾರಗಳು ೧೬

ಸಂಸ್ಕಾರಗಳು ಕೃಷಿಕನು ತನ್ನ ಹೊಲದಿಂದ ಭತ್ತದ ಗಿಡವನ್ನು ಕೊಯ್ದುತಂದು ಭತ್ತಗಳನ್ನು ಬೇರ್ಪಡಿಸಿ ಕುಟ್ಟಿ ಶುದ್ದಿಗೊಳಿಸಿ ಉತ್ತಮವಾದ ಅಕ್ಕಿಯನ್ನು ತಯಾರಿಸುವನೋ, ಹಾಗೇ ಸಂಸ್ಕಾರ ಎನ್ನುವುದು ಮನುಷ್ಯನನ್ನು ಪರಿಪಕ್ವನನ್ನಾಗಿ ಮಾಡುವುದು, ಶುದ್ಧೀಕರಿಸುವಂತಹದ್ದು. ಪ್ರಧಾನವಾಗಿ ೧೬ ಸಂಸ್ಕಾರಗಳು ಇವೆ. ೧. ಗರ್ಭಾದಾನ ಹೆಣ್ಣು ಮತ್ತು ಗಂಡು ಮದುವೆಯಾಗಿ ಅವರು ಸೇರುವ ಮುನ್ನ ತಮ್ಮ ಜನ್ಮಾಂತರದಿಂದ ಬರುವಂತಹ ದೋಷ ನಿವಾರಣೆಗಾಗಿ ಗರ್ಭಾದಾನವೆಂಬ ವೈದಿಕ ಸಂಸ್ಕಾರವನ್ನು ಮಾಡಬೇಕು. ಗರ್ಭಾದಾನವನ್ನು ಯಾವಾಗ ಮಾಡಬೇಕು? ವಾರ: ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ ನಕ್ಷತ್ರ: ಅಶ್ವಿನಿ, ರೋಹಿಣಿ, ಉತ್ತರಾ, ಹಸ್ತ, ಸ್ವಾತಿ, ಅನುರಾಧಾ,ಮೂಲಾ, ಉ.ಷಾಢಾ, ಶ್ರವಣ, ರೇವತಿ, ಉ. ಭಾದ್ರ ತಿ,ಥಿ: ದ್ವಿತೀಯ, ತೃತೀಯ, ಪಂಚಮಿ, ಸಪ್ತಮಿ, ದಶಮಿ ಕಾಲ: ರಸಜ್ವಲೆ ಅಥವಾ ಋತುಮತಿಯಾದ ಮೇಲಿನ ೫ ರಿಂದ ೧೦ ದಿನದವರೆಗೆ ಮತ್ತು ೧೪ ರಿಂದ ೧೬ ದಿನದ ರಾತ್ರಿಯವರೆಗೆ ಲಗ್ನ: ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ಧನು, ಮೀನ ಹೀಗೆ ವೈದಿಕ ಸಂಸ್ಕಾರವಾದ ನಂತರ ಮೇಲೆ ಹೇಳಿದ ವಾರ, ತಿಥಿ, ನಕ್ಷತ್ರ, ಲಗ್ನಗಳಲ್ಲಿ ಪತಿ-ಪತ್ನಿಯರು ಸೇರಬೇಕು. ೨. ಪುಂಸವನ ಸಂಸ್ಕಾರ ಪ್ರಥಮ ಗರ್ಭ ಉಂಟಾದ ೩ನೇ ತಿಂಗಳಿನಲ್ಲಿ ಪುತ್ರ ಸಂತತಿ ಪ್ರಾಪ್ತಿಗಾಗಿ ಈ ವೈದಿಕ ಸಂಸ್ಕಾರವನ್ನು ಮಾಡಬೇಕು. ಈ ವಿಧಿಯಲ್ಲಿ ವಿಶೇಷವಾಗಿ ೨ ಉದ್ದು ಮತ್ತು ೧ ಗೋಧಿಯ ಪ್ರಾಶನವನ್ನು ವಿಧಿಸಿದೆ. ಪುಂಸವನ...

"ದೇವರ ಮನೆ ಮತ್ತು ಪೂಜೆ" ಯ ವಿಷಯಗಳು..

೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ.. ೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ವಿಗ್ರಹಗಳು, ಫೋಟೋಗಳು, ಯಂತ್ರಗಳು ಇಡಬೇಡಿ.. ೩. ದೇವರ ಮನೆಯಲ್ಲಿ ಗುಡಿಸೋ ಕಸವನ್ನು ಒಂದು ಬಟ್ಟೆಯಿಂದ ಗುಡಿಸಿದರೆ ತುಂಬಾ ಒಳ್ಳೆಯದು. ೪. ದೇವರ ಮನೆಯನ್ನು ಅರಿಸಿನ ಹಾಕಿದ ನೀರಿನಿಂದ ಶುದ್ಧ ಮಾಡಿ, ಆ ಮನೆಯಲ್ಲಿ ದೈವಕಳೆ ವೃದ್ಧಿಸಿ, ಹಣದ ಸಮಸ್ಯೆ ನಿವಾರಣೆಯಾಗುತ್ತದೆ, ನೆಲ ಒಣಗುವವರೆಗೂ ತುಳಿಯುವ ಹಾಗಿಲ್ಲ.. ೫. ದೇವರ ಮನೆಯಲ್ಲಿ ತುಂಬಾ ವಿಗ್ರಹಗಳು ಬೇಡ, ವಿಗ್ರಹಗಳು ಜಾಸ್ತಿಯಾದರೆ "ನೈವೇದ್ಯ "ದ ಪ್ರಮಾಣವೂ ಜಾಸ್ತಿ ಮಾಡಬೇಕಾಗುವುದು.. ೬. ತುಂಬಾ ಎತ್ತರದ ವಿಗ್ರಹಗಳು ಬೇಡ, ಅಕಸ್ಮಾತ್ತಾಗಿ ಇದ್ದರೆ ಪ್ರತಿದಿನ ಒಂದು ಸೇರು ಅಕ್ಕಿಯ ಅನ್ನವನ್ನಾದರೂ ನೈವೇದ್ಯ ಮಾಡಬೇಕಾಗುವುದು.. ೭. ದೇವರ ವಿಗ್ರಹಗಳನ್ನು ಮಂಗಳವಾರ, ಶನಿವಾರ , ಶುಕ್ರವಾರದಂದು ಶುದ್ಧಿ ಮಾಡುವುದು ಬೇಡ.. (ಅನಿವಾರ್ಯ ಪರಿಸ್ಥತಿಗಳಲ್ಲಿ, ಗ್ರಹಣ ಕಾಲದಲ್ಲಿ, ಇತ್ಯಾದಿ ಸಮಯದಲ್ಲಿ ಮಾಡಬಹುದು) ೮. ಪ್ರತೀ ಅಮಾವಾಸ್ಯೆ ಮತ್ತು ಪೌರ್ಣಾಮಿಯ ಮರುದಿನ ದೇವರ ವಿಗ್ರಹಗಲಕನ್ನು "ಅರಿಸಿನದ ನೀರಿನಿಂದ ಶುದ್ಧ ಮಾಡಿ.. ೯. ದೇವರ ಪೂಜೆಗೆ "ಆಂಜನೇಯ" ಸ್ವಾಮಿ ಇರೋ ಘಂಟೆಯನ್ನೇ ಉಪಯೋಗಿಸಿ, ಆಂಜನೇಯ ದೇವರ ಪಾದವನ್ನು ಹಿಡಿದು ಘಂಟೆಬಾರಿಸಬೇಕು.. ೧೦. ದೇವರುಗಳು ಯಾವಾಗಲೂ ಆಹಾರ ಕೇಳುತ್ತಿರುತ್ತವ...

ಕಾಲಸರ್ಪ ದೋಷಕ್ಕೆ ವಿನಾಯತಿ(ಯೋಗಭಂಗ)ಗಳು ಮತ್ತು ಕಾಳಸರ್ಪದೋಷಕ್ಕೆ ಪರಿಹಾರೋಪಾಯಗಳು

ಕಾಲಸರ್ಪ ದೋಷಕ್ಕೆ ವಿನಾಯತಿ(ಯೋಗಭಂಗ)ಗಳು ಮತ್ತು ಕಾಳಸರ್ಪದೋಷಕ್ಕೆ ಪರಿಹಾರೋಪಾಯಗಳು ಸಾದಾರಣವಾಗಿ ಯಾರದೇ ಜನ್ಮಕುಂಡಲಿಯಲ್ಲಿ (ಯಾವುದೇರೀತಿಯ)ಹನ್ನೆರಡು ಕಾಳಸರ್ಪದೋಷಗಳಿದ್ದಾಗ್ಯು ಕೂಡ ಅದನ್ನು ಭಂಗಗೊಳಿಸಬಲ್ಲ ಕೆಲವು ಯೋಗಗಳಿದ್ದಾಗ ಈ ಸರ್ಪದೋಷಗಳು ನಿವಾರಣೆಯಾಗುತ್ತವೆ ಅಥವ ಈ ಯೋಗದಿಂದ ಉಂಟಾಗುವ ಕೆಟ್ಟಫಲಗಳು ನಾಶವಾಗುತ್ತವೆ.ಅಂತಹ ಬಲವಾದ ಯೋಗಗಳೆಂದರೆ:- ಯಾರ ಜನ್ಮಕುಂಡಲಿಯಲ್ಲಿ ಪಂಚಮಹಾಪುರುಷಯೋಗಗಳಲ್ಲಿ ಯಾವುದಾದರು ಒಂದು ಯೋಗವಿದ್ದಾಗ್ಗೆ ಈ ಕಾಳಸರ್ಪದೋಷವು ಉಂಟುಮಾಡುವ ಕೆಟ್ಟಫಲವನ್ನು ನಾಶಮಾಡುತ್ತದೆ. ಆ ಪಂಚ ಮಹಾಪುರುಷ ಯೋಗಗಳು ಯಾವುವೆಂದರೆ:- *ಕುಜನಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ರುಚಕಯೋಗದಿಂದ* *ಬುದನಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ಭದ್ರಯೋಗದಿಂದ *ಗುರುವಿನಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ಹಂಸಯೋಗದಿಂದ* *ಶುಕ್ರನಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ಮಾಳವ್ಯಯೋಗದಿಂದ* *ಶನಿಯಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ಶಶ(ಸಸ)ಯೋಗದಿಂದ* *ಜನ್ಮ ಕುಂಡಲಿಯಲ್ಲಿ ಕೇಂದ್ರಗಳಾದ ೧ ೪ ೭ ೧೦ ನೇ ಮನೆಯಲ್ಲಿ ಶುಭಗ್ರಹಗಳಿದ್ದರೆ* *ಪ್ರಭಲವಾದ ಯೋಗಗಳು ಇರುವುದರಿಂದ* *ರಾಹುವುನೊಂದಿಗೆ ಯಾವುದೇ ಇತರೆ ಗ್ರಹವಿದ್ದು ಆ ಗ್ರಹ ಹೆಚ್ಚಿನ ಅಂತರದಲ್ಲಿ(ಡಿಗ್ರಿಯಲ್ಲಿ) ಇದ್ದಲ್ಲಿ ಈ ಯೋಗ ಭಂಗವಾಗುತ್ತದೆ(ಉದಾ:-೬ಡಿಗ್ರಿ೨೫ ನಿಮಿಷದಲ್ಲಿ ರಾ...

ಶ್ರಿಶನೈಶ್ಚರ ಪೀಡಾ ಪರಿಹಾರೋಪಾಯಗಳು

ಅವಶ್ಯಮೇವ ಭೋಕ್ತವ್ಯಂ ಕೃತಂ ಕರ್ಮ ಶುಭಾಶುಭಂ | ನಾಭುಕ್ತಂ ಕ್ಷೀಯತೇ ಕರ್ಮ ಕಲ್ಪಕೋಟಿಶತೈರಪಿ || – ಗರುಡಪುರಾಣ ಮಾಡಿದ ಒಳ್ಳೆಯ ಅಥವಾ ಕೆಟ್ಟ ಕರ್ಮಗಳನ್ನು ಖಂಡಿತ ಅನುಭವಿಸಲೇಬೇಕು. ಎಷ್ಟೇ ಕಾಲ ಕಳೆದರೂ ಅನುಭವಿಸದೆ ಕರ್ಮ ಕಳೆಯುವುದಿಲ್ಲ. ಇಂಥಹ ಕರ್ಮಗಳನ್ನು ತಿಳಿದುಕೊಳ್ಳಲು ಜ್ಯೋತಿಷ್ಯವೆಂಬ ದಿವ್ಯವಾದ ವಿದ್ಯೆಯನ್ನು ಪ್ರಾಚೀನರು ನಮಗೆ ದಯಪಾಲಿಸಿದ್ದಾರೆ. ವರಾಹಮಿಹಿರಾಚಾರ್ಯರು ಈ ಕುರಿತು “ಕರ್ಮಾರ್ಜಿತಂ ಪೂರ್ವಭವೇಸದಾದಿ ಯತ್ತಸ್ಯಪಂಕ್ತಿಂ ಸಮಭಿವ್ಯನಕ್ತಿ” ಪೂರ್ವಜನ್ಮದಲ್ಲಿ ಸಂಚಿತ ಶುಭಾಶುಭ ಕರ್ಮಫಲದ ಅನುಭವಕಾಲವನ್ನು ಈ ಶಾಸ್ತ್ರವು ಸೂಚಿಸುತ್ತದೆ ಎಂದು ಹೇಳಿದ್ದಾರೆ. ಗ್ರಹ್ಣಂತೀತಿ ಗ್ರಹಾಃ ಸರ್ವೇ ಗ್ರಹಾ ಪೀಡಾಕರಾಃ ಸ್ಮೃತಾಃ | (ಇನ್ನೋಬ್ಬರನ್ನು) ಹಿಡಿದುಕೊಳ್ಳುತ್ತವೆ ಎಂಬರ್ಥದಲ್ಲಿ ಗ್ರಹ ಎಂದು ಕರೆಯುತ್ತಾರೆ. ಗ್ರಹಗಳು ಪೀಡೆಯನ್ನು ಮಾಡುತ್ತವೆ. ಛಾಯಾಸೂನುಶ್ಚ ದುಃಖದಃ (ಪರಾಶರಹೋರಾ) – ಶನಿದೇವನು ದುಃಖವನ್ನು ಉಂಟುಮಾಡುತ್ತಾನೆ (ಸೂಚಿಸುತ್ತಾನೆ). ಇಂಥಹ ಗ್ರಹಗಳ ಪೀಡಾಪರಿಹಾರಕ್ಕಾಗಿ ಶಾಸ್ತ್ರಗಳು ಅನೇಕ ವಿಧಿ-ನಿರ್ದೇಶಗಳನ್ನು ಸೂಚಿಸುತ್ತವೆ. ಯಥೋಕ್ತಮೌಷಧಿಸ್ನಾನಂ ಗ್ರಹವಿಪ್ರಾರ್ಚನಂ ತಥಾ | ಗ್ರಹಾನುದ್ದಿಷ್ಯ ಹೋಮೋ ವಾ ತ್ರಿಧಾಶಾಂತಿರ್ಬುಧೈಃ ಸ್ಮೃತಾ || ವಿಶಿಷ್ಟ ಔಷಧಿಗಳಿಂದ ಸ್ನಾನ, ಬ್ರಾಹ್ಮಣರ ಸೇವೆ (ದಾನಾದಿಗಳಿಂದ), ಗ್ರಹಗಳ ಉದ್ದಿಷ್ಟ ಮಾಡುವ ಹೋಮ-ಹವನಗಳು – ಇವು ಗ್ರಹಗಳ ಶಾಂತಿಕರ್ಮಗಳು. ಇವುಗಳಲ್ಲದೆ ಪಾರಾಯಣ...

ತೌಡು ತೆಗೆಯದ ಅಮೃತಾಹಾರ

ತೌಡು ತೆಗೆಯದ ಅಮೃತಾಹಾರ ದೇಶದಲ್ಲಿ ಡಾಕ್ಟರುಗಳ ಸಂಖ್ಯೆ ಹೆಚ್ಚುತ್ತಿದೆ; ದೇಶೀಯ ಮತ್ತು ವಿದೇಶೀಯ ಪ್ರಚಂಡ ಔಷಧಿಗಳು ಹೊಸ ಹೊಸತಾಗಿ ನಿರ್ಮಿಸಲ್ಪಡುತ್ತಿವೆ; ರೋಗಗಳ ತಜ್ನರೂ ಮತ್ತು ರೋಗಗಳನ್ನು ಪರೀಕ್ಷಿಸುವ ವಿಧಾನಗಳೂ ವಿಫುಲವಾಗಿ ಬೆಳೆಯುತ್ತಿವೆ. ಆಸ್ಪತ್ರೆಗಳ ಸಂಖ್ಯೆ ವೃದ್ಧಿಗೊಳ್ಳುತ್ತಿದೆ. ಆದರೂ ರೋಗಿಗಳ ಸಂಖ್ಯೆ ಏಕೆ ಕಡಿಮೆಯಾಗುತ್ತಿಲ್ಲ? ಬ್ಲಡ್ ಪ್ರೆಶರ್, ಸಿಹಿಮೂತ್ರ, ಹೃದಯಾಘಾತ, ಕ್ಯಾನ್ಸರ್, ಮುಂತಾದ ರೋಗಗಳು ದಿನೇ ದಿನೇ ಹೆಚ್ಚು ಹೆಚ್ಚು ರೋಗಿಗಳನ್ನು ಏಕೆ ಬಲಿ ತೆಗೆದುಕೊಳ್ಳುತ್ತಿವೆ? ಈ ಪ್ರಶ್ನೆಗಳಿಗೆ ಸತ್ಯಪೂರ್ಣವಾದ ಒಂದೇ ಉತ್ತರವಿದೆ; ಅದೆಂದರೆ, ಜನತೆ ತಮ್ಮ ಆರೋಗ್ಯ ಮತ್ತು ರೋಗಪರಿಹಾರಕ್ಕಾಗಿ ಸರಿಯಾದ ಆಹಾರಕ್ಕಿಂತ ವಿಷಮಯವಾದ ಔಷಧಗಳನ್ನು ಹೆಚ್ಚಾಗಿ ಅವಲಂಬಿಸುತ್ತಿದೆ. ಈ ತಪ್ಪನ್ನು ತಿದ್ದಿಕೊಳ್ಳದಿದ್ದರೆ ಪರಿಸ್ಥಿತಿ ಇನ್ನೂ ಭೀಕರವಾಗುತ್ತಾ ಹೋಗುವುದು ನಿಶ್ಚಿತ. ’ಆಹಾರಾಧೀನಮಾರೋಗ್ಯಂ’ ಎಂದರೆ, ’ಆರೋಗ್ಯದ ಸ್ಥಿರವಾದ ಬುನಾದಿಯೇ ಆಹಾರ’ ಎಂದು ಆಯುರ್ವೇದವು ಸಾವಿರಾರು ವರ್ಷಗಳ ಹಿಂದೆಯೇ ಸಾರಿದೆ. ಆಯುರ್ವೇದದ ಆ ಸತ್ಯವನ್ನು ಪಾಶ್ಚಾತ್ಯ ವಿಜ್ನಾನಿಗಳು ಒಂದೊಂದನ್ನಾಗಿ ತಿಳಿಯುತ್ತಾ ಬಂದಿದ್ದಾರೆ. ಅದಕ್ಕೆ ನಾವು ಒಂದು ಉದಾಹರಣೆಯನ್ನು ಹೇಳಬಹುದೇ? ೧೮೯೮ ರಲ್ಲಿ ಅಮೆರಿಕೆಯು ಫಿಲಿಪೈನ್ ದ್ವೀಪಗಳನ್ನು ವಶಪಡಿಸಿಕೊಂಡಿತು. ಆಗ ಅಲ್ಲಿಯ ಜನತೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲು ಡಾಕ್ಟರುಗಳ ಸಮಿ...

ಪೋಷಕಾಂಶ ಬೇಕೆಂದರೆ ಸಿಪ್ಪೆಯನ್ನು ತಿನ್ನಿ

ಪೋಷಕಾಂಶ ಬೇಕೆಂದರೆ ಸಿಪ್ಪೆಯನ್ನು ತಿನ್ನಿ ಆಲೂಗೆಡ್ಡೆ ಹೆಚ್ಚಾಗಿ ಸೇವಿಸುವುದು ಒಳ್ಳೆಯದಲ್ಲ , ಅದು ದೇಹದಲ್ಲಿ ಬೊಜ್ಜು ಮತ್ತು ಗ್ಯಾಸ್ ಸಮಸ್ಯೆ ಹೆಚ್ಚು ಮಾಡುತ್ತೆ. ಆದರೆ ಅದನ್ನು ಸಿಪ್ಪೆ ಸಹಿತ ಬೇಯಿಸಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಿಮಗೆ ಗೊತ್ತೆ? ಆಲೂಗೆಡ್ಡೆ ಸಿಪ್ಪೆಯನ್ನು ತೆಗೆಯದಿದ್ದರೆ ಅದರಲ್ಲಿರುವ ಮಣ್ಣು ಹೊಟ್ಟೆ ಸೇರುತ್ತದೆ ಎಂದು ಭಾವಿಸುವವರು ಗಮನಿಸಬೇಕಾದ ಅಂಶವೆಂದರೆ ಇನ್ನು ಮುಂದೆ ಸಿಪ್ಪೆ ತೆಗೆದು ಆಲೂಗೆಡ್ಡೆಯನ್ನು ತಿನ್ನುವ ಬದಲು, ಚೆನ್ನಾಗಿ ತೊಳೆದು ಸಿಪ್ಪೆ ಸಹಿತ ಬೇಹಿಸಿ ತಿನ್ನಿ. ಈ ರೀತಿ ತಿನ್ನುವುದರಿಂದ ಆಗುವ ಪ್ರಯೋಜನಗಳ ಕುರಿತು ತಿಳಿಯಲು ಮುಂದೆ ಓದಿ. 1.ಆಲೂಗೆಡ್ಡೆಯನ್ನು ಸಿಪ್ಪೆ ಸಹಿತ ಬೇಯಿಸಿ ತಿನ್ನವುದರಿಂದ ಇದರಲ್ಲಿರುವ ಅಧಿಕ ನಾರಿನಂಶ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಇದನ್ನು ಇತರ ತರಕಾರಿ ಜೊತೆ ತಿನ್ನವುದರಿಂದ ಬೇರೆ ತರಕಾರಿಗಳು ಕೂಡ ಸುಲಭವಾಗಿ ಜೀರ್ಣವಾಗುವಂತೆ ಮಾಡುತ್ತದೆ. 2. ಆಲೂಗೆಡ್ಡೆ ಚಿಪ್ಪೆಯಲ್ಲಿ ವಿಟಮಿನ್ ಸಿ, ವಿಟಮಿನ್ ಬಿ6, ಪೊಟಾಷಿಯಂ, ತಾಮ್ರಾಂಶ, ಮ್ಯಾಗ್ನಷಿಯಂ ಮತ್ತು ನಾರಿನಂಶ ಅಧಿಕವಿರುತ್ತದೆ. 3. ಆಲೂಗೆಡ್ಡೆ ಸಿಪ್ಪೆಯಲ್ಲಿ 20% ಕಬ್ಬಿಣ ಮತ್ತು 8ಗ್ರಾಂ ಪ್ರೊಟೀನ್ ಇದ್ದು ಇತರ ತರಕಾರಿಗಳಿಗೆ ಹೋಲಿಸಿದರೆ ಆಲೂಗೆಡ್ಡೆ ಸಿಪ್ಪೆಯಲ್ಲಿ ಈ ಅಂಶಗಳು ಅಧಿಕವಿದೆ. 4. ಆಲೂಗೆಡ್ಡೆ ಸಿಪ್ಪೆ ಸೇವಿಸಿದರೆ ಹಾನಿಗೊಳಗಾದ ಜೀವ ಕಣಗಳನ್ನು ಮತ್ತೆ ಸರಿ ಪಡಿಸು...